ಮಾದಕ ವಸ್ತು ವಿರುದ್ಧ ವಿಶೇಷ ಕಾರ್ಯಾಚರಣೆ ಚಾಲ್ತಿ: ಗೃಹ ಸಚಿವ ಬೊಮ್ಮಾಯಿ

Update: 2020-07-29 11:21 GMT

ಬೆಂಗಳೂರು, ಜು.29: ಗಾಂಜಾ ಸೇರಿದಂತೆ ಇನ್ನಿತರೆ ಪ್ರಾಣ ಹಾನಿ ಮಾಡುವ ಮಾದಕ ವಸ್ತುಗಳ ಮಾರಾಟದ ಮೇಲೆ ವಿಶೇಷ ಕಾರ್ಯಾಚರಣೆ ಚಾಲ್ತಿಯಲ್ಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇವಲ ಬೆಂಗಳೂರಷ್ಟೇ ಅಲ್ಲದೆ ಇಡೀ ರಾಜ್ಯದಲ್ಲಿ ಈ ಮಾಫಿಯಾ ಸಂಪೂರ್ಣವಾಗಿ ನಿರ್ನಾಮವಾಗಬೇಕು. ಡ್ರಗ್ ಮಾಫಿಯಾದಲ್ಲಿ ಹಲವು ಜನರು ಭಾಗಿಯಾಗಿದ್ದಾರೆ. ಇಂತಹವರು ಇತರ ರಾಜ್ಯಗಳ ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಳ್ಳುತ್ತಿದ್ದಾರೆ ಎಂದು ಆತಂಕ ವಯಕ್ತಪಡಿಸಿಸದರು.

ಮಾದಕ ವಸ್ತು ಸಮಾಜಕ್ಕೆ ಮಾರಕವಾಗಿದ್ದರಿಂದ ರಾಜ್ಯದಲ್ಲಿ ಮಾದಕ ವಸ್ತು ಜಾಲಕ್ಕೆ ಕಡಿವಾಣ ಹಾಕಲು ಪೊಲೀಸರಿಗೆ ಸೂಚಿಸಲಾಗಿದೆ ಎಂದ ಅವರು, ಮಾದಕ ವಸ್ತುಗಳ ಮಾರಾಟ ನಿಷೇಧಿಸಲು ಈಗಾಗಲೇ ರಾಜ್ಯದ ಪ್ರಮುಖ ನಗರಗಳಲ್ಲಿ ಕಣ್ಗಾವಲು ಇಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

799 ಜನರ ಬಂಧನ

ಪ್ರಸ್ತುತ ಜೂನ್ ತಿಂಗಳ ಅಂತ್ಯಕ್ಕೆ 533 ದೂರು ದಾಖಲಾಗಿದ್ದು, 14 ವಿದೇಶಿಯರು ಸೇರಿ 799 ಆರೋಪಿಗಳನ್ನು ಬಂಧಿಸಲಾಗಿದೆ. 2019ನೆ ಸಾಲಿನಲ್ಲಿ 768 ಪ್ರಕರಣಗಳನ್ನು ದಾಖಲಿಸಿ 1260 ಆರೋಪಿಗಳನ್ನು ಬಂಧಿಸಲಾಗಿದೆ.

-ಬಸವರಾಜ ಬೊಮ್ಮಾಯಿ, ಗೃಹ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News