ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಮೋದನೆಯಿಂದ ಭಾರತದ ಭಾಗ್ಯ ತೆರೆದಿದೆ: ಪರಿಷತ್ ಸದಸ್ಯ ಅರುಣ ಶಹಾಪುರ
Update: 2020-07-29 17:36 IST
ಬೆಂಗಳೂರು, ಜು.29: ಕೇಂದ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಮೋದನೆ ನೀಡುವ ಮೂಲಕ ಭಾರತದ ಭಾಗ್ಯ ತೆರೆಯುವಂತಾಗಿದೆ ಎಂದು ವಿಧಾನಪರಿಷತ್ ಸದಸ್ಯ ಅರುಣ ಶಹಾಪುರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಕೇಂದ್ರದ ಸಚಿವ ಸಂಪುಟವು ಸರ್ವಾನುಮತದಿಂದ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಮೋದನೆ ನೀಡಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಕ್ರಿಯಲ್ ನಿಶಾಂಕ್, ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಿದ ಸಮಿತಿಯ ಅಧ್ಯಕ್ಷ ಕಸ್ತೂರಿ ರಂಗನ್, ಎಮ್.ಕೆ.ಶ್ರೀಧರ್ ಸೇರಿದಂತೆ ಎಲ್ಲ ಸಮಿತಿಯ ಸದಸ್ಯರು, ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.