ಭರ್ತಿಯಾಗದ ವೈದ್ಯಕೀಯ ಸೀಟು: ಮತ್ತೊಂದು ಸುತ್ತಿನ ಕೌನ್ಸೆಲಿಂಗ್‍ಗೆ ಪತ್ರ- ಡಾ.ಸುಧಾಕರ್

Update: 2020-07-29 12:08 GMT

ಬೆಂಗಳೂರು, ಜು. 29: `ಭರ್ತಿಯಾಗದ ವೈದ್ಯಕೀಯ ಸೀಟುಗಳನ್ನು ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮರುಹಂಚಿಕೆ ಮಾಡುವ ಕುರಿತು ಸಮಾಲೋಚನೆ ನಡೆಸಿದ್ದು, ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ನಡೆಸಲು ಅನುಮತಿ ಕೋರಿ ಎಂಸಿಐಗೆ ಪತ್ರ ಬರೆಯಲು ನಿರ್ಧರಿಸಲಾಗಿದೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬುಧವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಟ್ವೀಟ್ ಮಾಡಿರುವ ಅವರು, `ಇದೇ ವೇಳೆ ಶುಲ್ಕ ಪಾವತಿಸಿದ ನಂತರವೂ ದಾಖಲಾತಿ ದೊರಕದೆ ತೊಂದರೆಗೀಡಾಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಅವರ ಸಮಸ್ಯೆಯನ್ನು ವಿಚಾರಿಸಿದ್ದೇನೆ. ವಿದ್ಯಾರ್ಥಿಗಳಿಗೆ ಬ್ಯಾಂಕ್‍ನಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ' ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News