ಪಡುಬಿದ್ರಿ: ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Update: 2020-07-29 12:13 GMT

ಪಡುಬಿದ್ರಿ: ಪಡುಹಿತ್ಲು ಜಾರಂದಾಯ ದೈವಸ್ಥಾನ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು. ಅವರು ಪಡುಬಿದ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಈ  ಸೇತುವೆ ನಿರ್ಮಾಣಕ್ಕೆ ಐದು ದಶಕಗಳಿಂದ ಬೇಡಿಕೆ ಸಲ್ಲಿಸುತಿದ್ದರು. ಸೇತುವೆ ನಿರ್ಮಾಣದಿಂದ ಈ ಭಾಗದ ಜನರಿಗೆ ಉಪಯುಕ್ತವಾಗಲಿದೆ. ಕೋವಿಡ್-19ನಿಂದ ಅಭಿವೃದ್ಧಿ ಕಾರ್ಯಗಳಿಗೆ ಸ್ವಲ್ಪ ಮಟ್ಟಿಗೆ ಹಿನ್ನಡೆಯಾಗಲಿದ್ದು, ಕಾಲಕ್ರಮೇಣ ಸರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸನ್ಮಾನ: ಇದೇ ವೇಳೆ ಶಾಸಕ ಲಾಲಾಜಿ ಮೆಂಡನ್, ಜಿಲ್ಲಾ ಪಂಚಾಯಿತಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯಿತಿ ಅಧ್ಯಕ್ಷ ನೀತಾ ಗುರುರಾಜ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟುಯವರನ್ನು ಸನ್ಮಾನಿಸಲಾಯಿತು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನೀತಾ ಗುರುರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಬಿಜೆಪಿ ಮುಖಂಡ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಿಥುನ್ ಹೆಗ್ಡೆ, ಶಿವಪ್ರಸಾದ್ ಶೆಟ್ಟಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಯ್ಯದ್ದಿ ಕನ್ನಂಗಾರ್, ಶಶಿಕಲಾ ಪಡುಹಿತ್ಲು, ಸ್ಥಳೀಯ ಮುಂದಾಳು ಪ್ರಕಾಶ್ ಶೆಟ್ಟಿ ಪಡುಹಿತ್ಲು ಮುರಳೀಧರ ಪೂಜಾರಿ, ಲೋಹಿತಾಕ್ಷ ಸುವರ್ಣ ಮಯ್ಯದ್ದಿ ಕನ್ನಂಗಾರ್ ಮತ್ತಿತರರು ಉಪಸ್ಥಿತರಿದ್ದರು.

ಪಡುಹಿತ್ಲು ಜಾರಂದಾಯ ರಸ್ತೆ, ಕಲ್ಲಟ್ಟೆ ಜಾರಂದಾಯ ದೈವಸ್ಥಾನದಿಂದ ಬ್ರಹ್ಮಸ್ಥಾನ ರಸ್ತೆ, ಕಲ್ಲಟ್ಟೆ ರಸ್ತೆ, ಜಾರಂದಾಯ ದ್ವಾರ ರಸ್ತೆ, ಬೇಂಗ್ರೆ ರಸ್ತೆ, ಅಬ್ಬೇಡಿ-ಅವರಾಲು ರಸ್ತೆಯನ್ನು ಉದ್ಘಾಟಿಸಲಾಯಿತು. 

ರಾಮನಗರ ರತ್ನಾಕರ ಶೆಟ್ಟಿ- ಸಂಜೀವ್ ಪೂಜಾರಿ ಮನೆವರೆಗಿನ  ರಸ್ತೆ, ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ರಸ್ತೆ, ಧರ್ಮಜಾರಂದಾಯ ದೇವಸ್ಥಾನ ಬೀಚ್ ರಸ್ತೆ ಸೇರಿ ಒಟ್ಟು 80 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News