ರಾಷ್ಟ್ರೀಯ ಕಾನೂನು ವಿವಿಯಲ್ಲಿ ಸ್ಥಳೀಯರಿಗೆ ಮೀಸಲಾತಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-07-29 13:58 GMT

ಬೆಂಗಳೂರು, ಜು.29: ರಾಷ್ಟ್ರೀಯ ಕಾನೂನು ವಿವಿಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಮೀಸಲಾತಿ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಬಾಲಚಂದ್ರ ಕೃಷ್ಣನ್(17 ವರ್ಷ) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ರಾಷ್ಟ್ರೀಯ ಕಾನೂನು ವಿವಿಗೆ ನೋಟಿಸ್ ಜಾರಿಗೊಳಿಸಿದೆ.

ರಾಷ್ಟ್ರೀಯ ಕಾನೂನು ವಿದ್ಯಾಲಯ ಕಾಯ್ದೆ-2020 ಪ್ರಕಾರ ರಾಜ್ಯದಲ್ಲಿ 10 ವರ್ಷ ವ್ಯಾಸಂಗ ಮಾಡಿರುವ ಶೇ.25ರಷ್ಟು ವಿದ್ಯಾರ್ಥಿಗಳಿಗೆ ಮೀಸಲಾತಿ ದೊರೆಯಲಿದೆ. ಇದು ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ ಎಂದು ಅರ್ಜಿದಾರರು ಅರ್ಜಿಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News