ಅನ್ ಲಾಕ್ 3: ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರಗಳು ತೆರೆಯಲು ಅವಕಾಶ, ರಾತ್ರಿ ಕರ್ಫ್ಯೂ ಇಲ್ಲ

Update: 2020-07-29 14:22 GMT

ಹೊಸದಿಲ್ಲಿ: ಕೇಂದ್ರ ಸರಕಾರ ಇಂದು ಅನ್ ಲಾಕ್ 3 ಬಗ್ಗೆ ಮಾಹಿತಿ ನೀಡಿದ್ದು, ಕಂಟೈನ್ ಮೆಂಟ್ ಝೋನ್ ಗಳಲ್ಲದೆ ಕಡೆಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರಗಳು ತೆರೆಯಲು ಅವಕಾಶ ನೀಡಲಾಗಿದೆ. ರಾತ್ರಿ ಕರ್ಫ್ಯೂ ಕೂಡ ಕೊನೆಗೊಳ್ಳಲಿದೆ.

ಮೆಟ್ರೋ ರೈಲು ಮತ್ತು ಬೃಹತ್ ಪ್ರಮಾಣದಲ್ಲಿ ಗುಂಪುಗೂಡುವಿಕೆಯನ್ನು ನಿಷೇಧಿಸಲಾಗಿದೆ. ಸಿನೆಮಾ ಮಂದಿರಗಳು, ಸ್ವಿಮಿಂಗ್ ಪೂಲ್ ಗಳು, ಮನರಂಜನಾ ಪಾರ್ಕ್ ಗಳು, ಥಿಯೇಟರ್ ಗಳು, ಬಾರ್ ಗಳು, ಆಡಿಟೋರಿಯಂಗಳು ಕೂಡ ಬಾಗಿಲು ಮುಚ್ಚಬೇಕಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಶಾಲೆ, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಆಗಸ್ಟ್ ಕೊನೆಯವರೆಗೆ ಮುಚ್ಚಲಿವೆ. ಕಂಟೈನ್ ಮೆಂಟ್ ಝೋನ್ ಗಳಲ್ಲಿ ಲಾಕ್ ಡೌನ್ ಕಡ್ಡಾಯವಾಗಿ ಆಗಸ್ಟ್ 31ರವರೆಗೆ ಮುಂದುವರಿಯಲಿದೆ.

ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಮತ್ತು ಗುಂಪುಗೂಡುವಿಕೆಗೆ ಅವಕಾಶವಿಲ್ಲ.

ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ವಂದೇ ಭಾರತ್ ಅಭಿಯಾನದಡಿ ಸೀಮಿತ ಪ್ರಮಾಣದಲ್ಲಿ ಮಾತ್ರ ಅವಕಾಶವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News