×
Ad

4 ದಿನದ ಶಿಶುವಿನ ಆರೋಗ್ಯ ಸ್ಥಿತಿ ಗಂಭೀರ: ಶಿವಮೊಗ್ಗದಿಂದ ಮಣಿಪಾಲಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ

Update: 2020-07-29 19:52 IST

ಶಿವಮೊಗ್ಗ, ಜು.29: ನವಜಾತ ಶಿಶುವಿನ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಶಿಶುವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲು ಶಿವಮೊಗ್ಗ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದರು.

ಭದ್ರಾವತಿಯ ಅಶ್ವಥ ನಗರ ನಿವಾಸಿ ದೇವೇಂದ್ರಪ್ಪ‌ ಮತ್ತು ಸುಪ್ರಿಯಾ ದಂಪತಿಯ ನಾಲ್ಕು ದಿನದ ನವಜಾತ ಶಿಶುವಿಗೆ ಬ್ಲಡ್ ಇನ್ಫೆಕ್ಷನ್ ಇರುವ ಕುರಿತು ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ. ಹೀಗಾಗಿ ಮಗುವಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು.

ತುರ್ತಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಬೇಕಾಗಿದ್ದರಿಂದ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡುವಂತೆ ಪೋಷಕರು ಜಿಲ್ಲಾರಕ್ಷಣಾಧಿಕಾರಿ ಕೆ.ಎಂ ಶಾಂತರಾಜ್ ಅವರಿಗೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಮಗು ಇದ್ದ ಆಂಬ್ಯುಲೆನ್ಸ್ ಗೆ ಶಿವಮೊಗ್ಗ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಹಾಗೂ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಮಾಡಿದರು. ಬಳಿಕ ಪೊಲೀಸ್ ಬೆಂಗಾವಲಿನೊಂದಿಗೆ ಮಗುವನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News