ವಿಟ್ಲ: 9 ಮಂದಿ ಕಾರ್ಮಿಕರಿಗೆ ಪಾಸಿಟಿವ್; ಕಂಪೆನಿ ಸೀಲ್ ಡೌನ್

Update: 2020-07-29 14:29 GMT

ಬಂಟ್ವಾಳ: ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಬಲಿಪಗುಳಿಯಲ್ಲಿರುವ ಕಂಪೆನಿಯೊಂದರ 9 ನೌಕರರಿಗೆ ಕೊರೋನ ಸೋಂಕು ದೃಡಪಟ್ಟಿದೆ. ಕಂಪೆನಿಯನ್ನು ಸೀಲ್ ಡೌನ್ ಮಾಡಲಾಗಿದ್ದು, ಸುಮಾರು 300ಕ್ಕೂ ಹೆಚ್ಚಿನ ಕಾರ್ಮಿಕರಲ್ಲಿ ಆತಂಕ ವ್ಯಕ್ತವಾಗಿದೆ.

ಹಾಳೆತಟ್ಟೆ ತಯಾರಿಕೆಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆ ಹೊಂದಿರುವ ಇಕೋ-ಬ್ಲಿಝ್ ಕಂಪೆನಿಯಲ್ಲಿ ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹೊರರಾಜ್ಯಗಳ ಸಾಕಷ್ಟು ಜನ ಕಾರ್ಮಿಕರಿದ್ದಾರೆ. ಅದೇ ರೀತಿ ಸ್ಥಳೀಯರು ಕೂಡಾ ಸಾಕಷ್ಟು ಸಂಖ್ಯೆಯಲ್ಲಿ ದುಡಿಯುತ್ತಿದ್ದಾರೆ. ಇದೀಗ 9 ಕಾರ್ಮಿಕರಲ್ಲಿ ಸೋಂಕು ಪತ್ತೆಯಾಗಿದ್ದು ಮಂಗಳವಾರ ಕಂಪೆನಿಗೆ ಆಗಮಿಸಿದ ಟಾಸ್ಕ್ ಫೋರ್ಸ್ ಅಧಿಕಾರಿಗಳ ತಂಡ ಸೀಲ್ ಡೌನ್ ಮಾಡಿದ್ದಾರೆ. ಪಾಸಿಟಿವ್ ಪತ್ತೆಯಾದ ಕಾರ್ಮಿಕರಲ್ಲಿ ಯಾವುದೇ ರೋಗದ ಲಕ್ಷಣ ಕಂಡ ಬಾರದ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್ ನೀಡಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಪ್ರಾಥಮಿಕ ಸಂಪರ್ಕದಲ್ಲಿದ್ದ  ಹಲವು ಮಂದಿಗೆ 17 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News