ಉಡುಪಿ: ಮಗುವಿನ ಪೋಷಕತ್ವ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಜು.29: ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 44ರನ್ವಯ ಮಕ್ಕಳ ಪಾಲನೆ ಹಾಗೂ ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಮಗುವಿಗೆ ಸಂಬಂಧವಿಲ್ಲದ ಕುಟುಂಬಕ್ಕೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಮೀರದಂತೆ ಮಗುವನ್ನು ಪೋಷಕತ್ವ ಯೋಜನೆಯಡಿಯಲ್ಲಿ ನಿಯೋಜನೆ ಮಾಡಬಹುದಾಗಿದೆ.
ಮಗು ಹಾಗೂ ಕುಟುಂಬದ ಹೊಂದಾಣಿಕೆಯ ಆಧಾರದ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ ಮಗುವನ್ನು 18 ವರ್ಷದ ವಯಸ್ಸಿನವರೆಗೂ ಪೋಷಕತ್ವ ಮುಂದುವರೆಸಲು ಅವಕಾಶ ಕಲ್ಪಿಸಬಹುದಾಗಿದೆ. 6ರಿಂದ 18 ವರ್ಷದೊಳಗಿನ ಮಕ್ಕಳು, ಉಡುಪಿ ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾ ಗಿದ್ದು, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಾಗಿರುವ ಮಕ್ಕಳನ್ನು ಪೋಷಕತ್ವ ಯೋಜನೆಯಡಿಯಲ್ಲಿ ಪೋಷಿಸಲು ಆಸಕ್ತಿ ಇರುವ ಪೋಷಕರು ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574964, ಮೊ: 9449054062 ಅಥವಾ ಅಧ್ಯಕ್ಷರು ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಉಡುಪಿ, ದೂ.ಸಂ: 0820-2580220, ಮೊ:9448835228 ಸಂಪರ್ಕಿಸ ಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.