ನೂತನ ಶಿಕ್ಷಣ ನೀತಿಗೆ ಸಂಪುಟ ಅನುಮೋದನೆ; ಮಾನವ ಸಂಪನ್ಮೂಲ ಸಚಿವಾಲಯ ಈಗ ‘ಶಿಕ್ಷಣ ಸಚಿವಾಲಯ’

Update: 2020-07-29 15:54 GMT

ಹೊಸದಿಲ್ಲಿ, ಜು. 29: ನೂತನ ಶಿಕ್ಷಣ ನೀತಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ ಹಾಗೂ ಮಾನವ ಸಂಪನ್ಮೂಲ ಹಾಗೂ ಅಭಿವೃದ್ಧಿ ಸಚಿವಾಲಯಕ್ಕೆ ಶಿಕ್ಷಣ ಸಚಿವಾಲಯ ಎಂದು ಮರು ನಾಮಕರಣ ಮಾಡಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ)ಯ ಮಾಜಿ ವರಿಷ್ಠ ಕೆ. ಕಸ್ತೂರಿರಂಗನ್ ನೇತೃತ್ವದ ತಂಡ ಕಳೆದ ವರ್ಷ ನೂತನ ಶಿಕ್ಷಣ ನೀತಿಯ ಕರಡನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಕ್ರಿಯಾಲ್ ಅವರಿಗೆ ಸಲ್ಲಿಸಿತ್ತು. ವಿವಿಧ ಪಾಲುದಾರರಿಂದ ಪ್ರತಿಕ್ರಿಯೆ ಪಡೆಯಲು ಈ ಕರಡನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿತ್ತು. ಈ ಕರಡಿನ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ 2 ಲಕ್ಷಕ್ಕೂ ಅಧಿಕ ಪ್ರತಿಕ್ರಿಯೆ ಸ್ವೀಕರಿಸಿತ್ತು.

‘‘ಕರಡು ನೀತಿಗೆ ಅನುಮೋದನೆ ನೀಡಲಾಗಿದೆ. ಈ ಸಚಿವಾಲಯಕ್ಕೆ ಶಿಕ್ಷಣ ಸಚಿವಾಲಯ ಎಂದು ಮರು ನಾಮಕರಣ ಮಾಡಲಾಗಿದೆ’’ ಎಂದು ಮಾವನ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಪ್ರಸ್ತುತ ಅಸ್ತಿತ್ವದಲ್ಲಿ ಇರುವ ರಾಷ್ಟ್ರೀಯ ಶಿಕ್ಷಣ ನೀತಿ 1986ರಲ್ಲಿ ರೂಪಿಸಿರುವುದು ಹಾಗೂ ಅದನ್ನು 1992ರಲ್ಲಿ ಪರಿಷ್ಕರಿಸಲಾಗಿತ್ತು. ಈ ನೂತನ ಶಿಕ್ಷಣ ನೀತಿ 2014ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಪ್ರಣಾಳಿಕೆ ಆಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News