ವಕ್ಫ್ ಬೋರ್ಡ್ ಅಧ್ಯಕ್ಷ ಡಾ.ಯೂಸುಫ್ ಆರೋಗ್ಯ ಸ್ಥಿರ: ಮುಹಮ್ಮದ್ ಉಬೇದುಲ್ಲಾ ಶರೀಫ್
ಬೆಂಗಳೂರು, ಜು.29: ಕೋವಿಡ್-19 ಸೋಂಕಿಗೆ ಒಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಡಾ.ಮುಹಮ್ಮದ್ ಯೂಸುಫ್ ಆರೋಗ್ಯ ಸ್ಥಿರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬದಂತೆ ಡೈಲಿ ಪಾಸ್ಬಾನ್ ಪತ್ರಿಕೆಯ ಪ್ರಧಾನ ಸಂಪಾದಕ ಮುಹಮ್ಮದ್ ಉಬೇದುಲ್ಲಾ ಶರೀಫ್ ತಿಳಿಸಿದ್ದಾರೆ.
ಮುಹಮ್ಮದ್ ಯೂಸುಫ್ ಅವರ ಕುಟುಂಬ ಸದಸ್ಯರು ಹಾಗೂ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದರು ತಿಳಿಸಿರುವಂತೆ ಯೂಸುಫ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ತ್ವರಿತವಾಗಿ ಸ್ಪಂದಿಸುತ್ತಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ಅವರು ಹೇಳಿದ್ದಾರೆ.
ಆದುದರಿಂದ, ಸಾರ್ವಜನಿಕರು ಈ ವಿಚಾರಕ್ಕೆ ಸಂಬಂಧಿಸಿದಂತೆ ಆತಂಕಕ್ಕೆ ಒಳಗಾಗುವುದು ಬೇಡ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿರಿ ಎಂದು ಮುಹಮ್ಮದ್ ಉಬೇದುಲ್ಲಾ ಶರೀಫ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.