×
Ad

ಸರಕಾರಿ ನೌಕರರ ವೈದ್ಯಕೀಯ ಚಿಕಿತ್ಸೆಯ ಮರುಪಾವತಿಗೆ ಅವಕಾಶ

Update: 2020-07-29 23:33 IST

ಬೆಂಗಳೂರು, ಜು.29: ಸರಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರು ಸರಕಾರದಿಂದ ಮಾನ್ಯತೆ ಹೊಂದಿರದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ಚಿಕಿತ್ಸೆಯ ಮರುಪಾವತಿಯ ಅರ್ಹತಾದಾಯಕ ಮೊತ್ತದ ಬಗ್ಗೆ ಪ್ರಸ್ತಾವನೆಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಕಾರ್ಯಕಾರಿ ನಿರ್ದೇಶಕರಿಗೆ ಸಲ್ಲಿಸುವಂತೆ ಎಲ್ಲ ಇಲಾಖೆಗಳಿಗೆ ಸೂಚಿಸಲಾಗಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇಂತಹ ಪ್ರತಿಯೊಂದು ಕ್ಲೇಮುಗಳನ್ನು ಸಿಜಿಎಚ್‍ಎಸ್ ದರಪಟ್ಟಿಯಂತೆ ಪರಿಶೀಲಿಸಿ ಮರುಪಾವತಿಸಬಹುದಾದ ಅರ್ಹತಾದಾಯಕ ಮೊತ್ತದ ಮಾಹಿತಿಯನ್ನು ಸಕಾಲದಲ್ಲಿ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News