ಚಲಿಸುತ್ತಿದ್ದ ಲಾರಿಯಿಂದ ಬಿದ್ದು ಕಾರ್ಮಿಕ ಸಾವು

Update: 2020-07-29 18:29 GMT

ಮೈಸೂರು,ಜು.29: ವೇಗವಾಗಿ ಚಲಿಸುತ್ತಿದ್ದ ಲಾರಿಯಿಂದ ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಊಟಿ ರೋಡ್ ಟೋಲ್ ಗೇಟ್ ಬಳಿ ಈ ಘಟನೆ ನಡೆದಿದೆ. ಗೌಸಿಯಾ ನಗರದ ಫಾಸಿಲ್(20) ಮೃತ ಕಾರ್ಮಿಕ. ಮೈಸೂರಿನಿಂದ ಗುಂಡ್ಲುಪೇಟೆಗೆ ಲಾರಿ ತೆರಳುತ್ತಿತ್ತು. ಗುಂಡ್ಲುಪೇಟೆಯಲ್ಲಿ ಹೂವು ಲೋಡ್ ಮಾಡಿಕೊಂಡು ಬರಲು ಕ್ರೇಟ್‍ಗಳ ಸಮೇತ  ತೆರಳುತ್ತಿತ್ತು. ಈ ವೇಳೆ ಲಾರಿಯ ವೇಗಕ್ಕೆ ಕ್ರೇಟ್ ಗಳು ಉರುಳುತ್ತಿದ್ದವು. ಉರುಳುತ್ತಿದ್ದ ಕ್ರೇಟ್ ಗಳನ್ನ ಹಿಡಿಯಲು ಹೋದ ಫಾಸಿಲ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ತೀವ್ರ ಗಾಯಗೊಂಡ ಫಾಸಿಲ್ ನನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡುವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. 

ಸ್ಥಳಕ್ಕೆ ಮೈಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News