ಚಿಕ್ಕಮಗಳೂರು: ಸಿಇಟಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗೆ ಕೊರೋನ ದೃಢ

Update: 2020-07-30 05:00 GMT
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಜು.30: ಇಂದು ನಡೆಯಲಿರುವ ಸಿಇಟಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಯೊಬ್ಬರಲ್ಲಿ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದ್ದು, ಆದರೂ ಪರೀಕ್ಷೆ ಬರೆಯಲು ವಿಶೇಷವಾದ ವ್ಯವಸ್ಥೆ ಮಾಡಲಾಗಿದೆ.

ಮೂಡಿಗೆರೆ ತಾಲೂಕಿನ ಖಾಸಗಿ ಶಾಲೆಯ ವಿದ್ಯಾರ್ಥಿಗೆ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಮಂಗಳವಾರ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ವರದಿ ಪಾಸಿಟಿವ್ ಬಂದಿರುವುದು ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ.

ವಿದ್ಯಾರ್ಥಿಯ ಭವಿಷ್ಯದ ದೃಷ್ಠಿಯಿಂದ ಪರೀಕ್ಷೆಗೆ ತೊಂದರೆ ಆಗಬಾರದು ಎಂದು ನಗರದ ಮಧುವನ ಲೇಔಟ್ ನಲ್ಲಿನ ಕೋವಿಡ್ ಆಸ್ಪತ್ರೆಯ ವಿಶೇಷ ಕೇರ್ ಸೆಂಟರ್ ನಲ್ಲಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಆರೋಗ್ಯ, ಶಿಕ್ಷಣ ಇಲಾಖಾಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಮಂಜುನಾಥ ಮಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News