ಕೊಡಗು: ಕೊರೋನ ಸೋಂಕಿಗೆ ಮಹಿಳೆ ಬಲಿ; ಸಾವಿನ ಸಂಖ್ಯೆ 8ಕ್ಕೆ ಏರಿಕೆ

Update: 2020-07-30 05:27 GMT
ಸಾಂದರ್ಭಿಕ ಚಿತ್ರ

ಕೊಡಗು, ಜು.30: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು ಸಂಭವಿಸಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 8ಕ್ಕೇರಿದೆ. 

ಮಡಿಕೇರಿ ನಗರದ ಅಝಾದ್ ನಗರದ ನಿವಾಸಿಯಾದ 54 ವರ್ಷದ ಮಹಿಳೆಯೊಬ್ಬರಿಗೆ ಕಳೆದ ಮೂರು ದಿನಗಳಿಂದ ಜ್ವರ ಇದ್ದು, ನಗರದ ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ಜು.29ರಂದು ರಾತ್ರಿ ಉಸಿರಾಟದ ಸಮಸ್ಯೆ ತೀವ್ರಗೊಂಡ ಕಾರಣ ಅವರನ್ನು ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿದಾಗ ಕೊರೋನ ಪಾಸಿಟಿವ್ ಬಂದಿದೆ.

ಜಿಲ್ಲೆಯಲ್ಲಿ ಮೃತಪಟ್ಟ ಎಲ್ಲಾ ಪ್ರಕರಣಗಳಲ್ಲೂ ಉಸಿರಾಟದ ತೊಂದರೆಯಿದ್ದು, ಕೋವಿಡ್ ಆಸ್ಪತ್ರೆಗೆ ತಡವಾಗಿ ಬಂದ ಪ್ರಕರಣಗಳಾಗಿವೆ. ಆದ್ದರಿಂದ ಉಸಿರಾಟದ ಸಮಸ್ಯೆ ಇರುವವರು ತಕ್ಷಣವೇ ಕೋವಿಡ್ ಆಸ್ಪತ್ರೆಗೆ ಬಂದು ದಾಖಲಾಗಲು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News