ದಕ್ಷಿಣ ಕನ್ನಡ ಜಿಲ್ಲೆಯ 17 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ
Update: 2020-07-30 13:11 IST
ಮಂಗಳೂರು, ಜು.30: ಕರ್ನಾಟಕ ಪರೀಕ್ಷೆ ಪ್ರಾಧಿಕಾರದಿಂದ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆ ಜಿಲ್ಲೆಯ 17 ಕೇಂದ್ರಗಳಲ್ಲಿ ಆರಂಭಗೊಂಡಿದೆ.
ಕೇರಳದಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಹಂಚಿಕೊಂಡಿರುವ ಎಲ್ಲ ಗಡಿಗಳನ್ನು ಮುಚ್ಚಿರುವ ಪರಿಣಾಮ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಯಿತು. ತಲಪಾಡಿ ಗಡಿ ಮೂಲಕ ಮಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು 400 ವಿದ್ಯಾರ್ಥಿಗಳನ್ನು ಬಸ್ ಮೂಲಕ ನಗರದ ವಿವಿಧ ಪರೀಕ್ಷೆ ಕೇಂದ್ರಗಳಿಗೆ ಕರೆತರಲಾಯಿತು.
ಅದೇ ರೀತಿ ಸಾರಡ್ಕದಿಂದ ಪುತ್ತೂರಿನ ಪರೀಕ್ಷೆ ಕೇಂದ್ರಕ್ಕೆ ಆಗಮಿಸಲು 45 ವಿದ್ಯಾರ್ಥಿಗಳಿಗೆ ಹಾಗೂ ಪಂಜಿಕಲ್ಲಿನಿಂದ ಸುಳ್ಯದ ಪರೀಕ್ಷೆ ಕೇಂದ್ರಕ್ಕೆ ಬರಲು 11 ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಬಸ್ ವ್ಯವಸ್ಥೆ ಮಾಡಿದೆ.