ಸಿಇಟಿ: ಉಡುಪಿಯಲ್ಲಿ ಜೀವಶಾಸ್ತ್ರ ಪರೀಕ್ಷೆಗೆ 1,628 ಮಂದಿ ಗೈರು

Update: 2020-07-30 08:54 GMT

ಉಡುಪಿ, ಜು.30: ಈ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು ಉಡುಪಿ ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭಗೊಂಡಿದ್ದು, ಮೊದಲ ದಿನ ಬೆಳಗ್ಗೆ ನಡೆದ ಜೀವಶಾಸ್ತ್ರ ಪರೀಕ್ಷೆಗೆ ಒಟ್ಟು 1628 ಮಂದಿ ಗೈರುಹಾಜರಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮೊದಲ ಪರೀಕ್ಷೆ ಯಾವುದೇ ಅಹಿತಕರ ಘಟನೆಗಳಿಲ್ಲದೇ ಉಡುಪಿಯ ಐದು, ಕುಂದಾಪುರದ ಮೂರು ಹಾಗೂ ಕಾರ್ಕಳದ ಎರಡು ಕೇಂದ್ರಗಳಲ್ಲಿ ನಡೆದಿದ್ದು, ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ಒಟ್ಟು 3905 ವಿದ್ಯಾರ್ಥಿಗಳಲ್ಲಿ 2277 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಪ್ರಕರಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News