×
Ad

ಅಲ್ಪಸಂಖ್ಯಾತರ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Update: 2020-07-30 18:41 IST

ಉಡುಪಿ, ಜು.30: ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖರು) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅನುಭವಿ ಹಾಗೂ ನುರಿತ ವಕೀಲರ ಅಧೀನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ಕೊಡಿಸಿ ನಾಲ್ಕು ವರ್ಷಗಳ ವರೆಗೆ ತಿಂಗಳಿಗೆ 5,000ರೂ. ಶಿಷ್ಯವೇತನ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಕಾನೂನು ಪದವಿಗೆ ಸಂಬಂದಿಸಿದ ಎಲ್ಲಾ ಅಂಕಪಟ್ಟಿಗಳ ದೃಡೀಕೃತ ಪ್ರತಿಗಳು, ಬಾರ್ ಕೌನ್ಸಿಲ್ ನೋಂದಾವಣೆ ಪತ್ರದ ಪ್ರತಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪ್ರಗಳನ್ನು ಲಗತ್ತಿಸಿ ಸಲ್ಲಿಸಬೇಕು. ಅರ್ಜಿಗಳನ್ನು ಅವಶ್ಯಕ ದಾಖಲಾತಿಗಳೊಡನೆ ಆಗಸ್ಟ್ 11ರೊಳಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವೌಲಾನಾ ಆಜಾದ್ ಭವನ, ಅಲೆವೂರು ರ್ತೆ ಮಣಿಪಾಲ ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಳಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, (ದೂರವಾಣಿ:0820-2573596) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News