ಉಡುಪಿ: ಗುರುವಾರ 248 ಮಂದಿಗೆ ಕೊರೋನ ಪಾಸಿಟಿವ್; ಸೋಂಕಿತರ ಸಂಖ್ಯೆ 4143ಕ್ಕೆ ಏರಿಕೆ

Update: 2020-07-30 13:42 GMT

ಉಡುಪಿ, ಜು.30: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19ಗೆ ಪಾಸಿಟಿವ್ ಬರುವವರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಗುರುವಾರ ಇದು ಮತ್ತೊಮ್ಮೆ ದ್ವಿಶತಕ ಗಡಿದಾಟಿ 248 ಆಗಿದೆ. ಇದರೊಂದಿಗೆ ದಿನದಲ್ಲಿ 762 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೊರೋನ ಸೋಂಕು ಪತ್ತೆಯಾದ 248 ಮಂದಿಯಲ್ಲಿ ಉಡುಪಿ ತಾಲೂಕಿನ 80 ಮಂದಿ, ಕುಂದಾಪುರ ತಾಲೂಕಿನ 120 ಹಾಗೂ ಕಾರ್ಕಳ ತಾಲೂಕಿನ 48 ಮಂದಿ ಸೇರಿದ್ದಾರೆ. ಗುರುವಾರ 135 ಮಂದಿ ಪುರುಷರು, 97 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ 9 ಬಾಲಕರು ಹಾಗೂ 7 ಮಂದಿ ಬಾಲಕಿಯರು ಸೇರಿ 16 ಮಂದಿ ಮಕ್ಕಳು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇಂದಿನ 248 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 4143ಕ್ಕೇರಿದೆ ಎಂದರು.

61 ಮಂದಿ ಗುಣಮುಖ:  ಜಿಲ್ಲೆಯಲ್ಲಿ ಗುರುವಾರ ಒಟ್ಟು 61 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇವರಲ್ಲಿ ಕಾರ್ಕಳ ಆಸ್ಪತ್ರೆಯ 36, ಉಡುಪಿ ಟಿಎಂಎ ಪೈ ಆಸ್ಪತ್ರೆಯ 15 ಹಾಗೂ ಎಂಐಟಿ ಕೇಂದ್ರದ 10 ಮಂದಿ ಸೇರಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 2445ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 1669 ಮಂದಿ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಬಂದರೂ, ರೋಗದ ಗುಣಲಕ್ಷಣಗಳಿಲ್ಲದ 20 ಮಂದಿ ಇಂದು ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆಗೆ ಸೇರಿದ್ದಾರೆ. ಇದರಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 757 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಮುಂದುವರಿಸಿದಂತಾಗಿದೆ ಎಂದು ಡಾ.ಸೂಡ ತಿಳಿಸಿದರು.

784  ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಗುರುವಾರ 784 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 424 ಮಂದಿ, ಕೋವಿಡ್ ಸಂಪರ್ಕಿತರು 254 ಮಂದಿ ಇದ್ದರೆ, ಉಸಿರಾಟ ತೊಂದರೆಯ ಏಳು ಮಂದಿ, ಶೀತಜ್ವರದಿಂದ ಬಳಲುವ 73 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 26 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪಡೆದ 784 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 31,044ಕ್ಕೇರಿದೆ. ಇವುಗಳಲ್ಲಿ ಈವರೆಗೆ 26,292 ನೆಗೆಟಿವ್, 4143 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 29 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 609 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಗುರುವಾರ 47 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ 23 ಮಂದಿ ಕೋವಿಡ್ ಶಂಕಿತರು, 9 ಮಂದಿ ಉಸಿರಾಟ ತೊಂದರೆಯವರು ಹಾಗೂ 15 ಮಂದಿ ಶೀತಜ್ವರದಿಂದ ಬಳಲುವವರು ಸೇರಿದ್ದಾರೆ ಎಂದರು.

ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್‌ಗಳಿಂದ ಇಂದು 20 ಮಂದಿ ಬಿಡುಗಡೆಗೊಂಡಿದ್ದು, 313 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 59 ಮಂದಿ ಸೇರಿದಂತೆ ಒಟ್ಟು 7960 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 1403 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News