ಕೋವಿಡ್‌ಗೆ ಉಡುಪಿ ಜಿಲ್ಲೆಯಲ್ಲಿ ನಾಲ್ಕು ಬಲಿ

Update: 2020-07-30 14:32 GMT

ಉಡುಪಿ, ಜು.30: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನೊಂದಿಗೆ ಒಟ್ಟು ನಾಲ್ವರು ಮೃತಪಟ್ಟಿದ್ದು, ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನ ಕಾರಣದಿಂದ ಮೃತಪಟ್ಟವರ ಸಂಖ್ಯೆ 33ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಉಡುಪಿ ಇಂದಿರಾನಗರದ 67 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಿಡ್ನಿ ಹಾಗೂ ಇತರ ಸಮಸ್ಯೆಯ ಚಿಕಿತ್ಸೆಗೆ ದಾಖಲಾದ ಅವರಲ್ಲಿ ಕೊರೋನ ಸೋಂಕು ಪತ್ತೆಯಾದ ಬಳಿಕ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕುಂದಾಪುರದ ಅಜ್ರಿಯ 71 ವರ್ಷ ಪ್ರಾಯದ ಹಿರಿಯರೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತಿದ್ದು, ಪಾಸಿಟಿವ್ ಪತ್ತೆಯಾದ ಬಳಿಕ ನಿನ್ನೆ ರಾತ್ರಿ ಮೃತಪಟ್ಟರೆಂದು ತಿಳಿದುಬಂದಿದೆ. ಅದೇ ರೀತಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಕಿರಿಮಂಜೇಶ್ವರದ ವ್ಯಕ್ತಿಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಅದೇ ರೀತಿ 80 ವರ್ಷ ಪ್ರಾಯದ ಮಹಿಳೆಯೊಬ್ಬರೂ ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News