ರಾಜ್ಯದಲ್ಲಿ ರವಿವಾರದ ಲಾಕ್ ಡೌನ್ ರದ್ದು

Update: 2020-07-30 16:45 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.30: ರಾಜ್ಯ ಸರಕಾರವು ಆಗಸ್ಟ್ 2ರಿಂದಲೇ ಜಾರಿಗೆ ಬರುವಂತೆ ರವಿವಾರದ ಲಾಕ್ ಡೌನ್ ಅನ್ನು ರದ್ದುಗೊಳಿಸಿದೆ. ಆಗಸ್ಟ್ 5 ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿ ಜಿಮ್ ಮತ್ತು ಯೋಗ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಕೂಡಾ ರದ್ದುಗೊಳಿಸಿದೆ.

ಕೋವಿಡ್‌ ಸೋಂಕು ಹೆಚ್ಚುತ್ತಲೇ ಇರುವುದರಿಂದ ಆಗಸ್ಟ್‌ 31ರವರೆಗೆ ಶಾಲೆ- ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಅನುಮತಿ ನೀಡಿಲ್ಲ. ಸದ್ಯಕ್ಕೆ ಮೆಟ್ರೋ ಸಂಚಾರ, ಚಿತ್ರಮಂದಿರ, ಈಜುಕೊಳ, ಮನರಂಜನಾ ಉದ್ಯಾನವನ ತೆರೆಯುವುದಕ್ಕೆ ಅನುಮತಿ ನೀಡಲಾಗಿಲ್ಲ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪು ಸೇರುವುದರ ಮೇಲಿದ್ದ ನಿರ್ಬಂಧವನ್ನು ಮುಂದುವರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News