ಬೆಂಗಳೂರಿನ 19 ಖಾಸಗಿ ಆಸ್ಪತ್ರೆಗಳ ಪರವಾನಿಗೆ ತಾತ್ಕಾಲಿಕ ರದ್ದು

Update: 2020-07-30 17:31 GMT

ಬೆಂಗಳೂರು, ಜು.30: ಕೊರೋನ ಸೋಂಕಿತರಿಗೆ ಹಾಸಿಗೆ (ದಾಖಲಿಸಿಕೊಳ್ಳದ) ನೀಡದ ಹಿನ್ನೆಲೆ ನಗರದ 19 ಆಸ್ಪತ್ರೆಗಳ ಪರವಾನಿಗೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಕೊರೋನ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಹಾಸಿಗೆ ಮೀಸಲಿಡಲು ರಾಜ್ಯ ಸರಕಾರ ಆದೇಶಿಸಿದೆ. ಈ ಸಂಬಂಧ ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಆರೋಗ್ಯಾಧಿಕಾರಿಗಳು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿದ್ದರೂ ಕೆಲವು ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ಮೀಸಲಿಟ್ಟಿರಲಿಲ್ಲ. 

ಈ ಹಿನ್ನೆಲೆ ಕಂದಾಯ ಸಚಿವ ಆರ್.‌ಅಶೋಕ್ ಅವರ ಸೂಚನೆ ಮೇರೆಗೆ ಗುರುವಾರ ಬಿಬಿಎಂಪಿ ಜಂಟಿ ಆಯುಕ್ತರು ಹಾಗೂ ಆರೋಗ್ಯಾಧಿಗಳು ನೇತೃತ್ವದಲ್ಲಿ ಆರೋಗ್ಯ ಅಧಿಕಾರಿಗಳ ತಂಡವು ಹಾಸಿಗೆ ನೀಡದ 19 ಖಾಸಗಿ ಆಸ್ಪತ್ರೆಗಳ ಮುಂಭಾಗ ಸಾರ್ವಜನಿಕ ಪ್ರಕಟಣೆಯ ಬ್ಯಾನರ್ ಗಳನ್ನು ಅಳವಡಿಸಲಾಗಿದ್ದು, ತಾತ್ಕಾಲಿಕವಾಗಿ ಪರವಾನಗಿಯನ್ನು ರದ್ದುಪಡಿಸಲಾಗಿರುತ್ತದೆ. ಅಲ್ಲದೆ ಮುಂದಿನ ಕ್ರಮಕ್ಕಾಗಿ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ ಎಂದು ದಕ್ಷಿಣ ವಲಯ ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News