20 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ನಿಲ್ಲಿಸಿದ ಆಶಾ ಕಾರ್ಯಕರ್ತೆಯರು

Update: 2020-07-30 18:02 GMT

ಬೆಂಗಳೂರು, ಜು.30: ಗೌರವ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕುರಿತಂತೆ ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ತಮ್ಮ ಪ್ರತಿಭಟನೆ ಹಿಂಪಡೆದಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹಾಗೂ ಆರೋಗ್ಯ ಸಚಿವ ಶ್ರೀರಾಮಲು ಅವರು ಬೇಡಿಕೆ ಈಡೇರಿಕೆಗೆ ಭರವಸೆ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಎಲ್ಲ ಆಶಾ ಕಾರ್ಯಕರ್ತೆಯರು ಗುರುವಾರದಿಂದ ಕೆಲಸಗಳಿಗೆ ಮರಳಿದ್ದಾರೆ ಎಂದು ಹೇಳಿದ್ದಾರೆ.

ಬೇಡಿಕೆ ಈಡೇರಿಕೆ ಕುರಿತ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲ ಸಂಘ ಸಂಸ್ಥೆಗಳಿಗೆ, ಸಾಹಿತಿಗಳಿಗೆ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News