ತಾರತಮ್ಯ ಆರೋಪ: ಬೆಂಗಳೂರು ಮೆಡಿಕಲ್ ಕಾಲೇಜು ಸಿಬ್ಬಂದಿ ಪ್ರತಿಭಟನೆ

Update: 2020-07-30 18:20 GMT

ಬೆಂಗಳೂರು, ಜು.30: ಕೊರೋನ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ಅರೋಪಿಸಿ ಬೆಂಗಳೂರು ಮೆಡಿಕಲ್ ಕಾಲೇಜು ಸ್ಟಾಫ್ ನರ್ಸ್ ಗಳು ಗುರುವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು ಮೆಡಿಕಲ್ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ಖಾಯಂ ಶುಶ್ರೂಷಕರ ಸಂಘದ ಸದಸ್ಯರು, ಆರೋಗ್ಯ ಇಲಾಖೆಯ ಸ್ಟಾಫ್ ನರ್ಸ್‍ಗಳಿಗೆ ಸಿಗುವ ಸೌಲಭ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ಟಾಫ್ ನರ್ಸ್‍ಗಳಿಗೂ ಸಿಗಬೇಕು. ನೂತನ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಜ್ಯೋತಿ ಸಂಜೀವಿನಿ ಯೋಜನೆಯ ಸೌಲಭ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಸ್ಟಾಫ್ ನರ್ಸ್‍ಗಳಿಗೂ ಸಿಗಬೇಕು. ಕೊರೋನ ಕಾರ್ಯದಲ್ಲಿರುವ ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ಟಾಫ್ ನರ್ಸ್‍ಗಳಿಗೆ ಪ್ರೋತ್ಸಾಹ ಧನ, ವಿಶೇಷ ಭತ್ಯೆ ನೀಡಬೇಕು. ಮೂಲ ವೇತನದ ಶೇ.50ರಷ್ಟು ಹೆಚ್ಚುವರಿ ವೇತನ ಪರಿಷ್ಕರಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News