​ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಿಂದ ಮಂಗಳೂರು ಬಿಷಪ್ ಭೇಟಿ

Update: 2020-07-31 07:24 GMT

ಮಂಗಳೂರು, ಜು.31: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಅವರು ಮಂಗಳೂರು ಕೆಥೋಲಿಕ್ ಕ್ರೈಸ್ತ ಧರ್ಮ ಪ್ರಾಂತ್ಯದ  ಬಿಷಪ್ ಅತೀ ವಂ.ಡಾ.ಪೀಟರ್  ಪೌಲ್ ಸಲ್ದಾನ ಅವರನ್ನು ಕಾಂಗ್ರೆಸ್ ಮುಖಂಡರೊಂದಿಗೆ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ,ಅಭಯ ಚಂದ್ರ ಜೈನ್, ಶಾಸಕ ಯು.ಟಿ.ಖಾದರ್. ಮಾಜಿ ಸಂಸದ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿ ಸೋಜ, ಯು.ಆರ್. ಸಭಾಪತಿ,ಮಿಥುನ್ ರೈ,ಮಾಜಿ ಮೇಯರ್ ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News