ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಿಆರ್‌ಪಿಎಫ್ ಯೋಧನ ಬಂಧನ

Update: 2020-07-31 07:41 GMT

ಸುಕ್ಮಾ(ಛತ್ತೀಸ್‌ಗಡ), ಜು.31:ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ(ಸಿಆರ್‌ಪಿಎಫ್)ಯೋಧನೊಬ್ಬನನ್ನು ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಬಂಧಿಸಲಾಗಿದೆ.

ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತ ಬಾಲಕಿ ಹಾಗೂ ಆಕೆಯ ಕುಟುಂಬದವರು ದೊರ್ನಾಪಾಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆ ನಂತರ ಆರೋಪಿಯನ್ನು ಬಂಧಿಸಲಾಗಿದೆ.

"ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ದೂರು ದಾಖಲಾಗಿದ್ದು, ಅದರ ಆಧಾರದಲ್ಲಿ ನಾವು ತಕ್ಷಣವೇ ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ. ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ'' ಎಂದು ಸುಕ್ಮಾ ಉಪ ವಿಭಾಗೀಯ ಅಧಿಕಾರಿ ಅಖಿಲೇಶ್ ಕೌಶಿಕ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News