ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಉಟೋಪಚಾರ ಮಾಡಿದ್ದ ಸಿದ್ಧವ್ವ ಅಜ್ಜಿ ನಿಧನ

Update: 2020-07-31 08:40 GMT

ಬೆಳಗಾವಿ, ಜು.31:  ಭಾರತ‌ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ತಮ್ಮ ಮನೆಯಲ್ಲಿಟ್ಟು ಉಟೋಪಚಾರ ಮಾಡಿದ್ದ ಸಿದ್ಧವ್ವ ಮೇತ್ರಿ ಅವರು ನಿಧನ‌ ಹೊಂದಿದ್ದಾರೆ ಎಂದು ವರದಿಯಾಗಿದೆ.

ನಗರದ ಕಂಗ್ರಾಳಿ ಗಲ್ಲಿಯ ನಿವಾಸಿಯಾಗಿರುವ ಸಿದ್ದವ್ವ ಮೇತ್ರಿ (95), ಹಲವು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಸಿದ್ದವ್ವ ಮೇತ್ರಿ ಅವರು ಅವಕಾಶ ನೀಡಿದಲ್ಲದೆ, ಅಡುಗೆ ಮಾಡಿ ಊಟ‌ ಬಡಿಸಿದ್ದರು.  ಅಷ್ಟೇ ಅಲ್ಲ ತಮ್ಮ ಜೀವಿತಾವಧಿಯಲ್ಲಿ ಅಂಬೇಡ್ಕರ್ ಸಿದ್ಧಾಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಸಂತಾಪ:  ಅಂಬೇಡ್ಕರ್ ಅವರ ಸಿದ್ಧಾಂತದ ಪ್ರಚಾರದಲ್ಲಿದ್ದ ಸಿದ್ದವ್ವ ಮೇತ್ರಿ ಅವರ ಕುಟುಂಬಕ್ಕೆ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News