ನಿಷ್ಪಕ್ಷಪಾತ ತನಿಖೆಗೆ ದೇವೇಗೌಡ ಒತ್ತಾಯ

Update: 2020-07-31 09:04 GMT

ಬೆಂಗಳೂರು, ಜು. ೩೧: ಸಬ್ ಇನ್ಸ್ ಪೆಕ್ಟರ್ ಕಿರಣ್ ಆತ್ಮಹತ್ಯೆ ಪ್ರಕರಣದ ಸಂಪೂರ್ಣ ತನಿಖೆ ಆಗಬೇಕು.
ಆತ್ಮಹತ್ಯೆ ಮಾಡಿಕೊಳ್ಳೊ ಮಟ್ಟಕ್ಕೆ ಹಿಂಸೆ ಕೊಟ್ಟಿದ್ದಾರೆ ಅಂತ  ಹೇಳುತ್ತಿದ್ದಾರೆ. ಗೃಹ ಸಚಿವರು ಇದರ ಬಗ್ಗೆ ಸೂಕ್ತ ತನಿಖೆ ಮಾಡಬೇಕು‌  ಎಂದು ಮಾಜಿ ಪ್ರಧಾನಿ ದೇವೇಗೌಡ ಒತ್ತಾಯಿಸಿದ್ದಾರೆ.
ಇದನ್ನು ಸರ್ಕಾರ ಸರಿಯಾದ ತನಿಖೆ ಮಾಡದೇ ಹೋದ್ರೆ ಸರ್ಕಾರದ ವಿರುದ್ದ ಹೋರಾಟ ಮಾಡಬೇಕಾಗುತ್ತೆ.
ಗೃಹ ಸಚಿವರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದವರು ಹೇಳಿದರು.

ಜೆಡಿಎಸ್ ಕಾರ್ಯಕರ್ತರನ್ನ  ಕಾಂಗ್ರೆಸ್ ನವರು ಸೆಳೆಯುತ್ತಾರೆಂಬ ವಿಚಾರಕ್ಕೆ ನಾನು ಊಹಾಪೋಹದ ಮಾತುಗಳಿಗೆ ಉತ್ತರ ನೀಡಲ್ಲ. ನನಗು ಸಾಕಷ್ಟು ರಾಜಕೀಯ ಅನುಭವ ಇದೆ. ಏನು ನಡೆಯುತ್ತಿದೆ ಎಲ್ಲವೂ ಗೊತ್ತಿದೆ.
ಅವರ ಪಕ್ಷದ ತತ್ವ ಸಿದ್ಧಾಂತ‌ ಒಪ್ಪಿ ಬರೋದಾದರೆ ಬನ್ನಿ ಎಂದಿದ್ದಾರೆ. ಸೂಕ್ತ ಸಂದರ್ಭದಲ್ಲಿ ಈ ಬಗ್ಗೆ ನಾನು ಮಾತನಾಡುತ್ತೇನೆ. ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News