ಸಚಿವ ಬಿ.ಸಿ.ಪಾಟೀಲ್ ಅವರ ಪತ್ನಿ, ಅಳಿಯ, ಸಿಬ್ಬಂದಿಗೆ ಕೊರೋನ ಪಾಸಿಟಿವ್

Update: 2020-07-31 13:19 GMT
ಸಚಿವ ಬಿ.ಸಿ.ಪಾಟೀಲ್

ಹಾವೇರಿ, ಜು.31: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಪತ್ನಿ, ಅಳಿಯ ಹಾಗೂ ಅವರ ನಿವಾಸದ ಸಿಬ್ಬಂದಿ ಸೇರಿ ಒಟ್ಟು ಐವರಿಗೆ ಕೊರೋನ ಪಾಸಿಟಿವ್ ಬಂದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಬಿ.ಸಿ.ಪಾಟೀಲ್. ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗ ಸೇರಿದಂತೆ ಒಟ್ಟು ಐವರಿಗೆ ಕೊರೋನ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ ಎಂದು” ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News