ರಾಜ್ಯದಲ್ಲಿ ಮತ್ತೆ 5,483 ಮಂದಿಗೆ ಕೊರೋನ ಪಾಸಿಟಿವ್; 84 ಮಂದಿ ಸಾವು

Update: 2020-07-31 13:59 GMT

ಬೆಂಗಳೂರು, ಜು.31: ರಾಜ್ಯದಲ್ಲಿ ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆವರೆಗೆ 5483 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 84 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 2314ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ 20 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 10, ಧಾರವಾಡ 7, ಕಲಬುರಗಿ 6, ಮೈಸೂರು 5, ವಿಜಯಪುರದಲ್ಲಿ 5  ಸಾವು ಸಂಭವಿಸಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 2,220, ಬಳ್ಳಾರಿ 340, ಬೆಳಗಾವಿ 217, ಉಡುಪಿ 213, ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ತಲಾ 204 ಕೊರೋನ ಪ್ರಕರಣ ದೃಢಪಟ್ಟಿವೆ.

ಒಟ್ಟಾರೆ ರಾಜ್ಯದಲ್ಲಿ 1,24,115 ಕೊರೋನ ಸೋಂಕಿತರ ಪೈಕಿ 49,788 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 3,130 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 2314 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 72,005 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News