ಶಾಸಕರ ಅನರ್ಹತೆ ಕುರಿತು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ರಾಜಸ್ಥಾನದ ಮುಖ್ಯ ಸಚೇತಕ ಜೋಶಿ

Update: 2020-07-31 14:22 GMT

  ಹೊಸದಿಲ್ಲಿ, ಜು.31:ವಜಾಗೊಂಡಿರುವ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರ 18 ಬಂಡಾಯ ಶಾಸಕರ ವಿರುದ್ಧ ಅನರ್ಹತೆಯ ಪ್ರಕ್ರಿಯೆ ಮುಂದೂಡುವಂತೆ ರಾಜ್ಯ ಅಸೆಂಬ್ಲಿ ಸ್ಪೀಕರ್‌ಗೆ ನಿರ್ದೇಶನ ನೀಡಿರುವ ಹೈಕೋರ್ಟಿನ ಆದೇಶವನ್ನು ಪ್ರಶ್ನಿಸಿ ರಾಜಸ್ಥಾನ ಕಾಂಗ್ರೆಸ್‌ನ ಮುಖ್ಯ ಸಚೇತಕ ಮಹೇಶ್ ಜೋಶಿ ಶುಕ್ರವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿಯಲ್ಲಿ ಜೋಶಿ ಅವರು, ಹೈಕೋರ್ಟಿನ ಆದೇಶವು ಅಸಾಂವಿಧಾನಿಕ, ಕಾನೂನು ಬಾಹಿರ ಹಾಗೂ ಇದೇ ನ್ಯಾಯಾಲಯ 1992ರಲ್ಲಿ ಕಿಹೊಟೊ ಹೊಲೊಹೊನ್ ಪ್ರಕರಣದ ನೀಡಿರುವ ತೀರ್ಪಿಗೆ ವಿರುದ್ಧವಾಗಿದೆ ಎಂದು ವಾದಿಸಿದ್ದಾರೆ.

1992ರಲ್ಲಿ ಉಚ್ಚ ನ್ಯಾಯಾಲಯ ನೀಡಿರುವ ತೀರ್ಪಿನಲ್ಲಿ ಅನರ್ಹತೆ ಪ್ರಕ್ರಿಯೆ ನಿರ್ಧರಿಸಲು ಸ್ಪೀಕರ್‌ಗೆ ಅಧಿಕಾರವಿದೆ ಹಾಗೂ ಈ ಪ್ರಕ್ರಿಯೆಯಲ್ಲಿ ನ್ಯಾಯಾಂಗದ ಹಸ್ತಕ್ಷೇಪವನ್ನು ಅನುಮತಿಸುವುದಿಲ್ಲ ಎಂದು ಹೇಳಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News