ಉಡುಪಿ ಜಿಲ್ಲೆಯಲ್ಲಿ ಇಂದು 213 ಮಂದಿಗೆ ಕೊರೋನ ಪಾಸಿಟಿವ್; ನಾಲ್ವರು ಸಾವು

Update: 2020-07-31 14:52 GMT

ಉಡುಪಿ, ಜು.31: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 213 ಮಂದಿಗೆ ಕೋವಿಡ್-19 ಪಾಸಿಟಿವ್ ಕಂಡುಬಂದಿದೆ. ಸತತ ಎರಡನೇ ದಿನ ಪಾಸಿಟಿವ್ ಬಂದವರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ. ಅಲ್ಲದೆ ದಿನದಲ್ಲಿ 455 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಕೊರೋನ ಸೋಂಕು ಪತ್ತೆಯಾದ 213 ಮಂದಿಯಲ್ಲಿ ಉಡುಪಿ ತಾಲೂಕಿನ 116 ಮಂದಿ, ಕುಂದಾಪುರ ತಾಲೂಕಿನ 62 ಹಾಗೂ ಕಾರ್ಕಳ ತಾಲೂಕಿನ 34 ಮಂದಿ ಸೇರಿದ್ದಾರೆ. 105 ಮಂದಿ ಪುರುಷರು, 95 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ 6 ಬಾಲಕರು ಹಾಗೂ 7 ಮಂದಿ ಬಾಲಕಿಯರು ಸೇರಿ 13 ಮಂದಿ ಮಕ್ಕಳು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇಂದಿನ 213 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 4356ಕ್ಕೇರಿದೆ ಎಂದರು.

54 ಮಂದಿ ಗುಣಮುಖ: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 54 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡು ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದಾರೆ. ಇವರಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಯ 6, ಕಾರ್ಕಳ ಆಸ್ಪತ್ರೆಯ 18, ಉಡುಪಿ ಟಿಎಂಎ ಪೈ ಆಸ್ಪತ್ರೆಯ 18 ಹಾಗೂ ಎಂಐಟಿ ಕೇಂದ್ರದ 12 ಮಂದಿ ಸೇರಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 2522ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ1805 ಮಂದಿ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆುುತಿದ್ದಾರೆ ಎಂದು ಡಿಎಚ್‌ಓ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಬಂದರೂ, ರೋಗದ ಗುಣಲಕ್ಷಣಗಳಿಲ್ಲದ 736 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 84 ಮಂದಿ ಹೋಮ್ ಐಸೋಲೇಷನ್ ಚಿಕಿತ್ಸೆಯಲ್ಲಿ ಗುಣಮುಖರಾಗಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

621 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಶುಕ್ರವಾರ 621 ಮಂದಿಯ ಗಂಟಲುದ್ರವದ ಸ್ಯಾಂಪಲ್‌ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 501 ಮಂದಿ, ಕೋವಿಡ್ ಸಂಪರ್ಕಿತರು 72 ಮಂದಿ ಇದ್ದರೆ, ಶೀತಜ್ವರದಿಂದ ಬಳಲುವ 36 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಆಗಮಿಸಿದ 12 ಮಂದಿಯ ಸ್ಯಾಂಪಲ್‌ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.

ಇಂದು ಪಡೆದ 621 ಸ್ಯಾಂಪಲ್‌ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 31,665ಕ್ಕೇರಿದೆ. ಇವುಗಳಲ್ಲಿ ಈವರೆಗೆ 26,747 ನೆಗೆಟಿವ್, 4356 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ 37 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 562 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಶುಕ್ರವಾರ 40 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ 9 ಮಂದಿ ಕೋವಿಡ್ ಶಂಕಿತರು, 7 ಮಂದಿ ಉಸಿರಾಟ ತೊಂದರೆಯವರು ಹಾಗೂ 24 ಮಂದಿ ಶೀತಜ್ವರದಿಂದ ಬಲು ವವರು ಸೇರಿದ್ದಾರೆ ಎಂದರು.

ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ ‌ಗಳಿಂದ ಇಂದು 42 ಮಂದಿ ಬಿಡುಗಡೆಗೊಂಡಿದ್ದು, 311 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಡೆಯು ತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 77 ಮಂದಿ ಸೇರಿದಂತೆ ಒಟ್ಟು 8037 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿ ಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 1419 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸೂಡ ತಿಳಿಸಿದರು.

ಶುಕ್ರವಾರ ಕೋವಿಡ್‌ನಿಂದ ನಾಲ್ವರು ಸಾವು

ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು ನಾಲ್ವರು ಕೊರೋನ ಸೋಂಕಿನೊಂದಿಗೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅಲ್ಲದೇ ಕೊರೋನಕ್ಕೆ ಪಾಸಿಟಿವ್ ಬಂದ ಚಿಕ್ಕಮಗಳೂರಿನ ಒಬ್ಬರು ಸಹ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೊಕ್ಕರ್ಣೆಯ ಒಬ್ಬ ಹಿರಿಯ ವ್ಯಕ್ತಿ ಮಣಿಪಾಲ ಕೆಎಂಸಿಯಲ್ಲಿ ಇಂದು ಮೃತಪಟ್ಟರೆ, ಶಿರ್ವದ ಓರ್ವ ಮಹಿಳೆ ಮನೆಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದು, ಅವರಲ್ಲೂ ಪಾಸಿಟಿವ್ ಕಂಡುಬಂದಿದೆ. ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವ ಕಾಪುವಿನ ಹಿರಿಯ ರೊಬ್ಬರು ಇಂದು ಮೃತಪಟ್ಟರೆ, ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಣ್ಣ ಶಸ್ತ್ರಚಿಕಿತ್ಸೆ ಗೊಳಗಾದ ತೆಂಕನಿಡಿಯೂರಿನ ವ್ಯಕ್ತಿಯೊಬ್ಬರು ಸಹ ಕೋವಿಡ್ ಪಾಸಿಟಿವ್ ನೊಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನೊಂದಿಗೆ ಮೃತಪಟ್ಟವರ ಸಂಖ್ಯೆ ಈಗ 37ಕ್ಕೇರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News