ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ನೇಮಕ: ಸಿಎಂ ಪುತ್ರ ವಿಜಯೇಂದ್ರ, ಶೋಭಾ ಸೇರಿದಂತೆ ಹಲವರಿಗೆ ಸ್ಥಾನ

Update: 2020-07-31 16:02 GMT
ಶೋಭಾ ಕರಂದ್ಲಾಜೆ-ಬಿ.ವೈ. ವಿಜಯೇಂದ್ರ

ಬೆಂಗಳೂರು, ಜು.31: ರಾಜ್ಯ ಬಿಜೆಪಿ ಘಟಕದ ನೂತನ ಪದಾಧಿಕಾರಿಗಳನ್ನು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ನಿರ್ಮಲ್ ಕುಮರ್ ಸುರಾನಾ, ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇದಾರ್, ತೇಜಸ್ವಿನಿ ಅನಂತಕುಮಾರ್, ಪ್ರತಾಪ ಸಿಂಹ, ಎಂ.ಬಿ. ನಂದೀಶ್, ಬಿ.ವೈ. ವಿಜಯೇಂದ್ರ, ಎಂ. ಶಂಕರಪ್ಪ, ಎಂ. ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಎನ್. ರವಿಕುಮಾರ್, ಸಿದ್ದರಾಜು, ಅಶ್ವಥ್ ನಾರಾಯಣ, ಮಹೇಶ್ ತೆಂಗಿನಕಾಯಿ ನೇಮಕವಾಗಿದ್ದಾರೆ. ರಾಜ್ಯ ಕಾರ್ಯದರ್ಶಿಗಳಾಗಿ ಸತೀಶ್ ರೆಡ್ಡಿ, ತುಳಸಿ ಮುನಿರಾಜು ಗೌಡ, ಎಸ್. ಕೇಶವಪ್ರಸಾದ್, ಜಗದೀಶ್ ಹಿರೇಮನಿ, ಸುಧಾ ಜಯರುದ್ರೇಶ್, ಭಾರತಿ ಮಗ್ದುಮ್, ಹೇಮಾವತಿ ನಾಯಕ್, ಉಜ್ವಲಾ ಬಡವಣ್ಣಾಜೆ, ಕೆ.ಎಸ್. ನವೀನ್, ವಿನಯ್ ಬಿದರೆ ಅವರು ಸ್ಥಾನ ಪಡೆದಿದ್ದಾರೆ.

ರಾಜ್ಯ ಖಜಾಂಚಿಗಳಾಗಿ ಸುಬ್ಬ ನರಸಿಂಹ, ಲೆಹರ್ ಸಿಂಗ್ ಸಿರೋಯಾ ಅವರನ್ನು ನೇಮಕ ಮಾಡಲಾಗಿದೆ.

ಮೋರ್ಚಾ ಅಧ್ಯಕ್ಷರು: ಯುವ ಮೋರ್ಚಾ ಅಧ್ಯಕ್ಷರಾಗಿ ಡಾ. ಸಂದೀಪ್, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಗೀತಾ ವಿವೇಕಾನಂದ, ರೈತ ಮೋರ್ಚಾ ಅಧ್ಯಕ್ಷ- ಈರಣ್ಣ ಕಡಾಡಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ-ಅಶೋಕ ಗಸ್ತಿ, ಎಸ್.ಸಿ. ಮೋರ್ಚಾ ಅಧ್ಯಕ್ಷ- ಚಲವಾದಿ ನಾರಾಯಣಸ್ವಾಮಿ, ಎಸ್ಟಿ ಮೋರ್ಚಾ ಅಧ್ಯಕ್ಷ- ತಿಪ್ಪರಾಜು ಹವಾಲ್ದಾರ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಮುಝಾಮಿಲ್ ಅಹ್ಮದ್ ಬಾಬು ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೇಕಲ್ಲು, ರಾಜ್ಯ ವಕ್ತಾರರಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಲಾಗಿದೆ. ಪ್ರಕೋಷ್ಟಗಳ ಸಂಯೋಜಕರಾಗಿ ಎಂ.ಬಿ. ಭಾನುಪ್ರಕಾಶ್, ಡಾ.ಎ.ಹೆಚ್. ಶಿವಯೋಗಿಸ್ವಾಮಿ ಅವರನ್ನು ನೇಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News