ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಮನೆಗೆ ಡಿಕೆಶಿ ಭೇಟಿ

Update: 2020-08-01 10:22 GMT

ಮಂಗಳೂರು, ಆ.1: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶನಿವಾರ ಸುರತ್ಕಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ವಿಜಯ ಕುಮಾರ್ ಶೆಟ್ಟಿಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಅವರೊಂದಿಗೆ ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಜೆ.ಆರ್.ಲೋಬೊ, ಐವನ್ ಡಿಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪಕ್ಷದ ಮುಖಂಡರಾದ ಟಿ.ಕೆ. ಸುಧೀರ್, ಸದಾಶಿವ ಉಳ್ಳಾಲ್, ಸಂತೋಷ್ ಶೆಟ್ಟಿ, ರಮಾನಂದ ಪೂಜಾರಿ, ಶುಭೋದಯ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News