ಉಡುಪಿ: 1,026 ಆಶಾ ಕಾರ್ಯಕರ್ತೆಯರಿಗೆ ಸೀರೆ ವಿತರಣೆ

Update: 2020-08-01 12:43 GMT

ಉಡುಪಿ, ಜು. 31: ಕೊರೋನ ಸೋಂಕು ಹರಡದಂತೆ ನಿಯಂತ್ರಿಸುವ ಕಾರ್ಯದಲ್ಲಿ ಜೀವದ ಹಂಗು ತೊರೆದು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ, ಹೋರಾಟದ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರನ್ನು ಉಡುಪಿಯ ನಾಗರಿಕರೊಬ್ಬರು ತಮ್ಮ 60ನೇ ಹುಟ್ಟುಹಬ್ಬದ ಷಷ್ಟ್ಯಬ್ದ ಸಮಾರಂಭದಲ್ಲಿ ಗೌರವಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ 60 ವರ್ಷ ತುಂಬಿದ ಉಡುಪಿಯ ಹಿರಿಯ ದಸ್ತಾವೇಜು ಬರೆಹಗಾರ ರತ್ನಕುಮಾರ್ ಅವರು ಉಡುಪಿ ಜಿಲ್ಲೆಯ ಎಲ್ಲಾ 1,026 ಆಶಾ ಕಾರ್ಯಕರ್ತೆಯರಿಗೆ ಸೀರೆಗಳನ್ನು ಸಾಂಕೇತಿಕವಾಗಿ ಜಿಲ್ಲಾಡಳಿತಕ್ಕೆ ಹಸ್ತಾಂತ ರಿಸಿದರು. ಈ ಸಂದರ್ಭ ದಲ್ಲಿ ಶಾಸಕ ಕೆ.ರಘುಪತಿ ಭಟ್, ಜ್ಲಿಾಧಿಕಾರಿ ಜಿ.ಜಗದೀಶ್ ಉಪಸ್ಥಿತರಿದ್ದರು.

ತಮಗೆ 60 ವರ್ಷ ತುಂಬಿದಾಗ ಹೆಚ್ಚಿನವರು ಭಾರೀ ಹಣ ಖರ್ಚು ಮಾಡಿ ವೈಭವದ ಸಮಾರಂಭಗಳನ್ನು ಹಮ್ಮಿಕೊಂಡರೆ, ಹಿರಿಯ ದಸ್ತಾವೇಜು ಬರಹಗಾರರಾದ ರತ್ನಕುಮಾರ್ ಅವರು ಶ್ರಾವಣ ಶುಕ್ರವಾರದ ಪವಿತ್ರ ದಿನದಂದು ಕೊರೊನಾ ಸೋಂಕಿನ ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಡುವ ಆಶಾ ಕಾರ್ಯಕರ್ತೆಯರನ್ನು ಗೌರವಿಸಲು ಬಳಸಿಕೊಂಡರು ಎಂದು ಪ್ರಶಂಸಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್, ವೈದ್ಯಾಧಿಕಾರಿ ಡಾ. ಪ್ರೇಮಾನಂದ್ ಮೊದಲಾದವರು ಉಪಸ್ಥಿತರಿದ್ದರು. ನಿವೃತ್ತ ಅಧಿಕಾರಿ ಹರಿಕೃಷ್ಣ ಶಿವತ್ತಾಯ ಕಾರ್ಯಕ್ರಮ ನಿರ್ವಹಿಸಿದರು. ರತ್ನಕುಮಾರ್ ಕುಟುಂಬದ ಸದಸ್ಯರು ಈ ವೇಳೆ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News