ಮಂಗಳೂರು ವಿವಿ: ಪರೀಕ್ಷಾ ವೇಳಾಪಟ್ಟಿ ಪ್ರಕಟ

Update: 2020-08-01 14:27 GMT

ಮಂಗಳೂರು, ಆ.1: ಮಂಗಳೂರು ವಿಶ್ವವಿದ್ಯಾನಿಲಯವು 2019-20ನೇ ಸಾಲಿನ ಪದವಿಯ 6ನೆ ಸೆಮಿಸ್ಟರ್ ಮತ್ತು ಸ್ನಾತಕೋತ್ತರ ಪದವಿಯ 4ನೆ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಕೋವಿಡ್-19ನಿಂದಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಪೂರ್ವ ನಿರ್ಧರಿತ ವೇಳಾಪಟ್ಟಿಯಂತೆ ನಡೆಸಲು ಸಾಧ್ಯವಾಗಿರಲಿಲ್ಲ. ಸದ್ಯಕ್ಕೆ ಯುಜಿಸಿ ಹಾಗೂ ಉನ್ನತ ಶಿಕ್ಷಣ ಇಲಾಖೆಗಳ ಮಾರ್ಗಸೂಚಿಯಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಸೆಪ್ಟೆಂಬರ್ ಅಂತ್ಯದೊಳಗೆ ನಡೆಸಬೇಕಾಗಿದೆ. ಹೀಗಾಗಿ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.mangaloreuniversity.ac.in ನಲ್ಲಿ ಪ್ರಕಟಿಸಲಾಗಿದೆ.

ಈ ಮಾಹಿತಿಯನ್ನು ಸಂಯೋಜಿತ, ಸ್ವಾಯತ್ತ ಹಾಗೂ ಘಟಕ ಕಾಲೇಜುಗಳು ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ವೆಬ್‌ಸೈಟ್‌ನಿಂದ ಪಡೆಯಬಹುದು ಎಂದು ವಿವಿ ಕುಲಸಚಿವರ ಪ್ರಕಟನೆ ತಿಳಿಸಿದೆ.

ವಿ.ವಿ ಶೈಕ್ಷಣಿಕ ಮಂಡಳಿಯ ಸಭೆ : ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ 2020-21ನೇ ಸಾಲಿನ ಪ್ರಥಮ ವಿಶೇಷ ಸಭೆ ಆ.4ರಂದು ಪೂ.11ಕ್ಕೆ ಕೊಣಾಜೆಯ ಮಂಗಳ ಗಂಗೋತ್ರಿಯ ಆಡಳಿತ ಸೌಧದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News