ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ಹೆಪಟೈಟಿಸ್ ದಿನಾಚರಣೆ

Update: 2020-08-01 16:36 GMT

ಮಂಗಳೂರು, ಆ.1: ವಿಶ್ವ ಹೆಪಟೈಟಿಸ್ ದಿನಾಚರಣೆ ಪ್ರಯುಕ್ತ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಕಾಯ ಚಿಕಿತ್ಸಾ ವಿಭಾಗದ  ವತಿಯಿಂದ ಕಾಲೇಜಿನಲ್ಲಿ ಜು. 27ರಂದು ಕಾರ್ಯಕ್ರಮ ವನ್ನು ಆನ್ ಲೈನ್ ವ್ಯವಸ್ಥೆಯೊಂದಿಗೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಂಗಳೂರು ನಗರದ ಖ್ಯಾತ ಆಯುರ್ವೇದ ವೈದ್ಯ ಹಾಗೂ ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಮಂಗಳೂರು ಶಾಖೆಯ ಅಧ್ಯಕ್ಷ  ಡಾ. ಕೃಷ್ಣ ಎಂ. ಗೋಕುಲೆ ಯವರು ಹೆಪಟೈಟಿಸ್ ರೋಗ ಉಂಟಾಗಲು ಕಾರಣ ಹಾಗೂ ಅದರ ತಪಾಸಣೆ ಬಗ್ಗೆ ಮಾಹಿತಿ ನೀಡಿದರಲ್ಲದೆ, ಕಾಮಾಲೆ ರೋಗದ ಚಿಕಿತ್ಸೆ" ಎಂದು ವಿಷಯದ ಬಗ್ಗೆ ವಿವರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗುಜರಾತ್ ಶ್ರೀ ಆರ್.ವಿ. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ಹಾಗೂ ಯೋಗ ವಿಭಾಗದ ಮುಖ್ಯಸ್ಥರಾದ ಡಾ, ಆದಿತ್ಯ ಭಟ್ ಅವರು ಹೈಪಟೈಟಿಸ್ ರೋಗವನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ನಂತರ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ . ಯು.ಕೆ.ಖಾಲಿದ್ ರವರು ಕಾಲೇಜಿನ ಸಮಾಜ ಮುಖಿ ಸೇವೆ ಹಾಗೂ ವರ್ತಮಾನ ಕಾಲದಲ್ಲಿ ಆಯುರ್ವೇದ ಪದ್ಧತಿಯ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಕಾಯ ಚಿಕಿತ್ಸಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆ ವಿಜೇತರನ್ನು ಘೋಷಿಸಲಾಯಿತು.

ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಉದಯ್ ಅವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ ಕುಮಾರ ರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮವನ್ನು ಕಾಯಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ವಹೀದಾ ಬಾನು ಅವರು ಸಂಯೋಜಿಸಿ, ವಂದಿಸಿದರು. ಡಾ. ಕೃಪಾ ಹಾಗೂ ಡಾ, ಭುಗಿಲೆಂದಿ ಕಾರ್ಯಕ್ರಮವನ್ನು ನಿರೂಪಿಸಿದರು. ಕೊರೋನ ಲಾಕ್‌ಡೌನ್ ಹಿನ್ನಲೆಯಲ್ಲಿ ಆನ್‌ಲೈನ್‌ನಲ್ಲಿಯೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News