ಸ್ಟಾಫ್‍ ನರ್ಸ್ ಗಳ ಬೇಡಿಕೆ ಈಡೇರಿಕೆಗೆ ಕ್ರಮ: ಸಚಿವ ಡಾ.ಕೆ.ಸುಧಾಕರ್ ಭರವಸೆ

Update: 2020-08-01 18:25 GMT

ಬೆಂಗಳೂರು, ಆ. 1: ಬೆಂಗಳೂರು ಮೆಡಿಕಲ್ ಕಾಲೇಜು (ಬಿಎಂಸಿಆರ್‍ಐ) ಮತ್ತು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಪ್ರತಿಭಟಿಸಿದ ಸ್ಟಾಫ್‍ನರ್ಸ್ ಗಳ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಕೂಡಲೇ ಚರ್ಚಿಸಿ, ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.

ಶನಿವಾರ ಕೋವಿಡ್-19 ಕಾರ್ಯದಲ್ಲಿ ನಿರತರಾಗಿರುವ ನರ್ಸ್ ಗಳು ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಆಗ್ರಹಿಸಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವ ಡಾ.ಕೆ.ಸುಧಾಕರ್, `ಸಿಬ್ಬಂದಿಯ ಬೇಡಿಕೆಗಳ ಬಗ್ಗೆ ಕೂಡಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಚರ್ಚೆ ಮಾಡಲಾಗುವುದು. ಆದಷ್ಟು ಬೇಗನೆ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.

`ಕೊರೋನ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಸಿಬ್ಬಂದಿ ಕೆಲಸಕ್ಕೆ ಮರಳಿ ಕಾರ್ಯಪ್ರವೃತ್ತರಾಗಬೇಕು. ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಈ ಸಮಯದಲ್ಲಿ ಎಲ್ಲವನ್ನೂ ಗಮನದಲ್ಲಿರಿಸಿಕೊಂಡು ಸರಕಾರವು ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸಲಿದೆ' ಎಂದು ಸಚಿವ ಸುಧಾಕರ್ ಅವರು ಟ್ವಿಟ್ಟರ್ ಮೂಲಕ ಆಶ್ವಾಸನೆ ನೀಡಿದ್ದಾರೆ.

ಆದಷ್ಟು ಬೇಗ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ. ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಈ ತಕ್ಷಣವೇ ತಾವು ಕಾರ್ಯಪ್ರವೃತ್ತರಾಗಿ. ಕೊರೋನ ಸೋಂಕು ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಸರಕಾರ ನಿಮ್ಮ ಬೇಡಿಕೆ ಈಡೇರಿಸಲಿದೆ'

-ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News