ರಸ್ತೆ ಸುರಕ್ಷತಾ ಕಾರ್ಯಕ್ರಮಗಳ ಅನುಷ್ಠಾನಕ್ಕೆ 2.5 ಕೋಟಿ ರೂ. ಬಿಡುಗಡೆ

Update: 2020-08-01 18:52 GMT

ಬೆಂಗಳೂರು, ಆ.1: ಸಾರಿಗೆ ಕಲ್ಯಾಣ ಮತ್ತು ರಸ್ತೆ ಸುರಕ್ಷತೆ ಯೋಜನೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಜಾರಿಗೊಳಿಸಲು 2020-21ನೇ ಸಾಲಿನ ಆಯವ್ಯಯದಲ್ಲಿ ಹಂಚಕೆಯಾಗಿರುವ 10 ಕೋಟಿ ರೂ. ಅನುದಾನದಲ್ಲಿ ಮೊದಲ ತ್ರೈಮಾಸಿಕ 2.5 ಕೋಟಿ ರೂ.ಬಿಡುಗಡೆ ಮಾಡಿ ಆದೇಶಿಸಲಾಗಿದೆ.

ಅನುಮೋದಿತ ಕ್ರಿಯಾ ಯೋಜನೆಯನ್ವಯ ಮಾತ್ರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸತಕ್ಕದ್ದು. ಕೆಟಿಪಿಸಿ ಕಾಯ್ದೆ ಮತ್ತು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಕಾಮಗಾರಿಗಳನ್ನು ಕೈಗೊಳ್ಳತಕ್ಕದ್ದು. ಬಿಡುಗಡೆಯಾದ ಅನುದಾನವನ್ನು ಉಪಯೋಗಿಸಿಕೊಂಡಿರುವುದಕ್ಕೆ ಬಳಕೆ ಪ್ರಮಾಣ ಪತ್ರ ಮತ್ತು ಭೌತಿಕ ಪ್ರಗತಿಯ ವಿವರವನ್ನು ಮುಂದಿನ ಅನುದಾನ ಬಿಡುಗಡೆ ಪ್ರಸ್ತಾವನೆಯೊಂದಿಗೆ ಸಲ್ಲಿಸತಕ್ಕದ್ದು ಎಂದು ಸಾರಿಗೆ ಇಲಾಖೆಯ ಉಪ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News