ಗೃಹಸಚಿವ ಅಮಿತ್ ಶಾ ಅವರಿಗೆ ಕೊರೋನ ಪಾಸಿಟಿವ್

Update: 2020-08-02 11:30 GMT

ಹೊಸದಿಲ್ಲಿ, ಆ.2: ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ವಿಚಾರವನ್ನು ಶಾ ಅವರು ಟ್ವೀಟ್ ಮುಖಾಂತರ ತಿಳಿಸಿದ್ದಾರೆ.

ಕೊರೋನದ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ನಾನು ಪರೀಕ್ಷೆಗೆ ಒಳಗಾಗಿದ್ದೆ. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಸ್ವಯಂ ಐಸೋಲೇಸನಲ್ಲಿರಬೇಕಾಗಿ ವಿನಂತಿಸಿಕೊಳ್ಳುತ್ತೇನೆಂದು ಶಾ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News