ದ.ಕ.: ಕೋವಿಡ್‌ಗೆ ಒಂದೇ ದಿನ 10 ಬಲಿ; ಹೊಸದಾಗಿ 163 ಮಂದಿಗೆ ಸೋಂಕು

Update: 2020-08-02 13:49 GMT

ಮಂಗಳೂರು, ಆ. 2: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ರವಿವಾರ ಇದೇ ಮೊದಲ ಬಾರಿಗೆ ಒಂದೇ ದಿನ 10 ಮಂದಿ ಬಲಿಯಾಗಿದ್ದಾರೆ. ಜೊತೆಗೆ ಹೊಸದಾಗಿ 163 ಮಂದಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನದಿಂದ ಮೃತಪಡುವವರ ಸಂಖ್ಯೆಯಲ್ಲಿ ತೀರಾ ಹೆಚ್ಚಳಗೊಂಡು ಭೀತಿ ಮೂಡಿಸಿದೆ. ಇಲ್ಲಿಯವರೆಗೆ ಒಂದಕಿಯಲ್ಲಿದ್ದ ಸಾವಿನ ಸಂಖ್ಯೆ ಈಗ ದಿಢೀರನೆ ಎರಡಂಕಿಗೆ ಜಿಗಿತ ಕಂಡಿದೆ. ಜಿಲ್ಲೆಯಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆ 169ಕ್ಕೆ ಏರಿಕೆಯಾಗಿದೆ.

163 ಮಂದಿಗೆ ಸೋಂಕು: ರವಿವಾರ ಹೊಸದಾಗಿ 163 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,015ಕ್ಕೆ ಏರಿದೆ. ಸೋಂಕಿತರ ಪೈಕಿ ಮಂಗಳೂರು ತಾಲೂಕಿನಲ್ಲೇ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ.

ಮಂಗಳೂರು-107, ಬಂಟ್ವಾಳ-13, ಬೆಳ್ತಂಗಡಿ-19, ಪುತ್ತೂರು-11, ಸುಳ್ಯ-1, ಹೊರಜಿಲ್ಲೆಯ ಒಂಬತ್ತು, ಹೊರರಾಜ್ಯದ ಮೂವರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಸೋಂಕಿತರನ್ನು ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

45 ಮಂದಿ ಗುಣಮುಖ: ಸಮಾಧಾನಕರ ಬೆಳವಣಿಗೆಯಲ್ಲಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ 2,730 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ 3,116 ಸಕ್ರಿಯ ಪ್ರಕರಣಗಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News