ಉಡುಪಿ ಜಿಲ್ಲೆಯಲ್ಲಿ 65 ಮಿ.ಮೀ. ಮಳೆ

Update: 2020-08-02 15:15 GMT

ಉಡುಪಿ, ಆ.2: ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 65ಮಿ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

 ರವಿವಾರ ಬೆಳಗ್ಗೆ ಉತ್ತಮ ಮಳೆಯಾಗಿದ್ದು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಂಡುಬಂದಿದೆ. ಉಡುಪಿ ತಾಲೂಕಿನಲ್ಲಿ 62 ಮಿ.ಮೀ, ಕಾರ್ಕಳ 57 ಮಿ.ಮೀ, ಕುಂದಾಪುರ 76 ಮಿ.ಮೀ. ಮಳೆಯಾಗಿದೆ. ಜಿಲ್ಲೆ ಯಲ್ಲಿ ಯಾವುದೇ ಮಳೆ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ.

ಉಡುಪಿ, ಕಾಪು, ಕುಂದಾಪುರ, ಹೆಬ್ರಿ, ಬ್ರಹ್ಮಾವರ, ಕಾರ್ಕಳ ತಾಲೂಕಿನ ಗ್ರಾಮೀಣ ಪ್ರದೇಶದ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವು ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News