×
Ad

ಆನ್‍ಲೈನ್‍ನಲ್ಲಿ ಪದವಿ ಪ್ರವೇಶಾತಿಗೆ ಸೂಚನೆ

Update: 2020-08-02 21:46 IST

ಬೆಂಗಳೂರು, ಆ. 2: ಪ್ರಸಕ್ತ ಸಾಲಿನಲ್ಲಿ ಪದವಿ ತರಗತಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್‍ಲೈನ್ ಮೂಲಕವೂ ನಡೆಸುವಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.

ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಆನ್‍ಲೈನ್ ಪ್ರವೇಶಾತಿಗೂ ಆದ್ಯತೆ ನೀಡಲಾಗಿದ್ದು, ರಾಜ್ಯದಲ್ಲಿರುವ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಆನ್‍ಲೈನ್‍ನಲ್ಲಿ ಪ್ರವೇಶ ನೀಡುವಂತೆ ಇಲಾಖೆಯ ಆಯುಕ್ತ ಪ್ರದೀಪ್ ಸುತ್ತೋಲೆ ಹೊರಡಿಸಿದ್ದಾರೆ. ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಆನ್‍ಲೈನ್ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ ಕಾಲೇಜಿನಿಂದ ಮುದ್ರಿತ ಅರ್ಜಿ ಪಡೆದು ಭರ್ತಿ ಮಾಡಿ, ದ್ವಿತೀಯ ಪಿಯುಸಿ ಅಂಕಪಟ್ಟಿಯ ದೃಢೀಕೃತ ಪ್ರತಿ ಯೊಂದಿಗೆ ಕಾಲೇಜಿನಲ್ಲಿ ಸಲ್ಲಿಸಬಹುದು.

ಆ ಅರ್ಜಿಯಲ್ಲಿನ ವಿವರಗಳನ್ನು ಕಾಲೇಜಿನ ಆನ್‍ಲೈನ್ ಅರ್ಜಿ ಟೆಂಪ್ಲೇಟ್‍ನಲ್ಲಿ ಭರ್ತಿ ಮಾಡುವಂತೆ ಕಾಲೇಜುಗಳಿಗೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News