ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳಿ: ಉಡುಪಿ ಡಿಸಿ ಜಗದೀಶ್

Update: 2020-08-03 15:25 GMT

ಉಡುಪಿ, ಆ.3: ಜಿಲ್ಲೆಯಲ್ಲಿ ಕೋಡ್ ಪ್ರಕರಣಗಳು ಗಣನೀಯ ಪ್ರಮಾಣ ದಲ್ಲಿ ಏರಿಕೆಯಾಗುತ್ತಿದ್ದು, ಈನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಅಂಗಡಿ ಮುಂಗಟ್ಟುಗಳು, ರೆಮೋಟೊ, ಸ್ವಿಗ್ಗಿಯಂಥ ಆಹಾರ ವಿತರಕ ಸಂಸ್ಥೆಗಳು, ಹೊಟೇಲ್ ಮತ್ತು ರೆಸ್ಟೋರೆಂಟ್ ‌ಗಳು ತಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ ಕೋವಿಡ್ ತಪಾಸಣೆ ಮಾಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತೊಮ್ಮೆ ತಿಳಿಸಿದ್ದಾರೆ.

ಈ ಹಿಂದೆ ನೀಡಿದ ಆದೇಶಕ್ಕೆ ಕೆಲವು ಸಂಸ್ಥೆಗಳನ್ನು ಹೊರತುಪಡಿಸಿ ಹೆಚ್ಚಿನ ಸಂಸ್ಥೆಯವರು ತಮ್ಮ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸದೇ ಇರುವುದು ಕಂಡುಬಂದಿದೆ. ಆದ್ದರಿಂದ ಜಿಲ್ಲೆಯಲ್ಲಿರುವ ಎಲ್ಲಾ ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಅಂಗಡಿ ಮುಂಗಟ್ಟುಗಳು, ಆಹಾರ ವಿತರಕ ಸಂಸ್ಥೆಗಳು, ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳು ಕಡ್ಡಾಯವಾಗಿ ತಮ್ಮ ವ್ಯಾಪ್ತಿಗೆ ಸೇರಿದ ತಾಲೂಕು ಆರೋಗ್ಯಾಧಿಕಾರಿ ಗಳನ್ನು ಸಂಪರ್ಕಿಸಿ ದಿನಾಂಕವನ್ನು ನಿಗದಿಪಡಿಸಿ ಕೊಂಡು ರ್ಯಾಪಿಡ್ ಆ್ಯಂಟಿಜಿನ್ ಟೆಸ್ಟ್ (ಆಎಟಿ) ಮೂಲಕ ತಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ತಪಾಸಣೆ ಮಾಡಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಆದೇಶವನ್ನು ಉಲ್ಲಂಸಿದ್ದಲ್ಲಿ ಅಂತಹ ಸಂಸ್ಥೆಯವರನ್ನು ಅಪರಾಧಿ ಎಂದು ಪರಿಗಣಿಸಿ, ಕಾಯ್ದೆಯನ್ವಯ ಕಠಿಣ ಶಿಕ್ಷೆಗೆ ಗುರಿಪಡಿಸಬಹು ದಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯಾಗಿರುವ ಜಿ.ಜಗದೀಶ್ ಎಚ್ಚರಿಸಿದ್ದಾರೆ.

ಈ ಆದೇಶವನ್ನು ಉಲ್ಲಂದ್ದಲ್ಲಿ ಅಂತಹ ಸಂಸ್ಥೆಯವರನ್ನು ಅಪರಾಧಿ ಎಂದು ಪರಿಗಣಿಸಿ, ಕಾಯ್ದೆಯನ್ವಯ ಕಠಿಣ ಶಿಕ್ಷೆಗೆ ಗುರಿಪಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯಾಗಿರುವ ಜಿ.ಜಗದೀಶ್ ಎಚ್ಚರಿಸಿದ್ದಾರೆ. ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ: ಕುಂದಾಪುರ: 08254-230730, ಉಡುಪಿ: 0820- 2526428, ಕಾರ್ಕಳ: 08258-231788.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News