ಹೊಯ್ಸಳ-ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

Update: 2020-08-03 16:38 GMT

ಮಂಗಳೂರು, ಆ.3: ಪ್ರಸಕ್ತ 2020-21ನೇ ಸಾಲಿಗೆ ಬಾಲಕರಿಗಾಗಿ ‘ಹೊಯ್ಸಳ’ ಮತ್ತು ಬಾಲಕಿಯರಿಗಾಗಿ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆರರಿಂದ ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ 10,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಶೌರ್ಯ ಪ್ರದರ್ಶಿಸಿದ ಅವಧಿಯು 2019ರ ಆಗಸ್ಟ್‌ನಿಂದ 2020ರ ಜುಲೈನೊಳಗೆ ನಡೆದಿರಬೇಕು. 2002ರ ಆಗಸ್ಟ್ 1ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರು.

ಈ ಬಗ್ಗೆ ಪೊಲೀಸ್ ಇಲಾಖೆಯ ಪ್ರಥಮ ವರ್ತಮಾನ ವರದಿ (ಎಫ್‌ಐಆರ್), ಭಾವಚಿತ್ರ, ಜನ್ಮದಿನಾಂಕ ದಾಖಲೆ (ತಾಲೂಕುಗಳಲ್ಲಿ ತಹಶೀಲ್ದಾರ್‌ರು/ನಗರಗಳಲ್ಲಿ ಮಹಾನಗರ ಪಾಲಿಕೆಯಿಂದ ದೃಢೀಕರಿಸಿದ) ಹಾಗೂ ಶೌರ್ಯ ಪ್ರದರ್ಶಿಸಿದ ಬಗೆಗಿನ ಪತ್ರಿಕಾ ವರದಿ ಇನ್ನಿತರ ಪೂರಕ ದಾಖಲೆಗಳನ್ನು ಅರ್ಜಿ ಜೊತೆಗೆ ಲಗತ್ತಿಸಬೇಕು.

 ಅರ್ಜಿಗಳನ್ನು ಆ.30ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಪಂ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006ಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824- 2451254ನ್ನು ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News