ಕೋವಿಡ್19: ರಾಜ್ಯದ ಎಲ್ಲ ಶಾಲೆಗಳನ್ನು ಆ.31ರವರೆಗೆ ಮುಚ್ಚುವಂತೆ ಶಿಕ್ಷಣ ಇಲಾಖೆ ಆದೇಶ

Update: 2020-08-03 17:09 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.3: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಾಲೆಗಳನ್ನು ಆ.31ರವರೆಗೆ ಮುಚ್ಚುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಹಿಂದೆ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಜು.31ರವರೆಗೆ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಆದರೆ, ರಾಜ್ಯದಲ್ಲಿ ಕೊರೋನ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಆದೇಶದಂತೆ ರಾಜ್ಯಾದ್ಯಂತ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ಆ.31ರವರೆಗೆ ಮುಚ್ಚುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News