ಪಿಪಿಇ ಕಿಟ್ ಧರಿಸಿ ಕೊರೋನ ಸೋಂಕಿತರ ಆರೋಗ್ಯ ವಿಚಾರಿಸಿದ ಶಾಸಕ ಪ್ರಿಯಾಂಕ್ ಖರ್ಗೆ

Update: 2020-08-03 17:55 GMT

ಬೆಂಗಳೂರು, ಆ.3: ಕಲಬುರಗಿ ಜಿಲ್ಲೆಯಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲಾಡಳಿತ ಕೂಡ ಕೊರೋನ ನಿಯಂತ್ರಣಕ್ಕೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಮಧ್ಯೆ ಚಿತ್ತಾಪುರ ಪಟ್ಟಣದ ನಾಗಾವಿ ಕ್ಯಾಂಪಸ್‍ನಲ್ಲಿರೋ ಕೊರೋನ ಚಿಕಿತ್ಸಾ ಕೇಂದ್ರಕ್ಕೆ  ಶಾಸಕ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಪಿಪಿಇ ಕಿಟ್ ಧರಿಸಿದ ಪ್ರಿಯಾಂಕ್ ಖರ್ಗೆ ಅವರು ಕೊರೋನ ಸೋಂಕಿತರೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಸರಿಯಾದ ಊಟೋಪಚಾರ ಹಾಗೂ ಅಗತ್ಯ ಔಷಧಿಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಿಕಿತ್ಸಾ ಕೇಂದ್ರದಿಂದ ಹೊರ ಬಂದು ಮಾತನಾಡಿದ ಪ್ರಿಯಾಂಕ್ ಅವರು, ಕೊರೋನ ತಡೆಗಟ್ಟಲು ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದ್ದರೂ ರಾಜ್ಯ ಸರಕಾರ ಕಲಬುರ್ಗಿ ಜಿಲ್ಲೆಯಲ್ಲಿ ಇನ್ನಷ್ಟು ಕೊರೋನ ಪರೀಕ್ಷಾ ಕೇಂದ್ರಗಳನ್ನು ತೆರೆಯಬೇಕು. ಹೊರ ರಾಜ್ಯದಿಂದ ಕಲಬುರ್ಗಿಗೆ ಬರುತ್ತಿರುವ ಜನರನ್ನು ಕ್ವಾರಂಟೈನ್ ಮಾಡುವ ಮೂಲಕ ಕೊರೋನ ತಡೆಗಟ್ಟಬೇಕೆಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News