ಆರ್‍ಟಿಇ: ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆ ಪೂರ್ಣ

Update: 2020-08-03 18:05 GMT

ಬೆಂಗಳೂರು, ಆ.3: 2020-21ನೇ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಮೊದಲನೇ ಸುತ್ತಿನ ಲಾಟರಿಯನ್ನು ಆನ್‍ಲೈನ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿ ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ.

ಶಿಕ್ಷಣ ಹಕ್ಕು ಕಾಯ್ದೆಯಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ 11,466 ಅರ್ಜಿಗಳು ಸ್ವೀಕೃತವಾಗಿದ್ದು. ಅದರಲ್ಲಿ 11,026 ಅರ್ಹ ಅರ್ಜಿಗಳನ್ನು ಜು.29ರಂದು ಲಾಟರಿಯನ್ನು ಆನ್‍ಲೈನ್ ಮೂಲಕ ನಡೆಸಿ ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ.

ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಮೊದಲ ಸುತ್ತಿನ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತಿದ್ದು, ಶಾಲೆಗಳು ಮಕ್ಕಳನ್ನು ದಾಖಲು ಮಾಡಿಕೊಂಡ ಬಗ್ಗೆ ಆನ್‍ಲೈನ್‍ನಲ್ಲಿ ಅಪ್‍ಡೇಟ್ ಮಾಡಿ ದೃಢೀಕರಣ ಮಾಡಬೇಕಾಗುತ್ತದೆ. ಆ ನಂತರ ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆ ನಡೆಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News