ಬೆಳ್ತಂಗಡಿ: ಚಲಿಸುತ್ತಿದ್ದ ಪಿಕಪ್ ಮೇಲೆ ಮುರಿದುಬಿದ್ದ ಹೈಟೆನ್ಶನ್ ವಿದ್ಯುತ್ ಕಂಬ

Update: 2020-08-04 05:41 GMT

ಬೆಳ್ತಂಗಡಿ, ಆ.4: ಚಲಿಸುತ್ತಿದ್ದ ಪಿಕಪ್ ವಾಹನದ ಮೇಲೆ ಹೈಟೆನ್ಶನ್ ವಿದ್ಯುತ್ ಕಂಬವೊಂದು ಮುರಿದು ಬಿದ್ದು ಘಟನೆ ಇಲ್ಲಿನ ಪಗಡಿ ಸಮೀಪ ಮಂಗಳವಾರ ಮುಂಜಾವ ನಡೆದಿದೆ.

ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಅಲ್ಲಲ್ಲಿ, ಮರಗಳು ವಿದ್ಯುತ್ ಕಂಬಗಳು ಉರುಳುತ್ತಿವೆ. ಇಂದು ಬೆಳಗ್ಗಿನ ಜಾವ ಸುಮಾರು 5 ಗಂಟೆಗೆ ವೇಣೂರು ಗೋಳಿಯಂಗಡಿಯಿಂದ ಗುರುವಾಯನಕೆರೆಗೆ ಲಿನ್ಸ್ ಟಿ.ಡಿ. ಎಂಬವರು ಪಿಕಪ್ ಚಲಾಯಿಸಿಕೊಂಡು ಬರುತ್ತಿರುವ ಸಂದರ್ಭ ಪಡಂಗಡಿ ಸುಬೋದ್ ಮಹಲ್ ಬಳಿ ಇದ್ದಕ್ಕಿದ್ದಂತೆ ಹೈಟೆನ್ಶನ್ ವಿದ್ಯುತ್ ಕಂಬ ಮುರಿದು ಪಿಕಪ್ ಮೇಲೆ ಬಿದಿದ್ದೆ. ಆದರೆ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಚಾಲಕ ಪಾರಗಿದ್ದಾರೆ.

ಇದೇ ಪ್ರದೇಶದಲ್ಲಿ ಇನ್ನೂ ಎರಡು ಕಂಬಗಳು ವಾಲಿದ್ದು ಬೀಳುವ ಹಂತದಲ್ಲಿದೆ. ಘಟನೆ ನಡೆದ ಕೂಡಲೇ ಊರವರು, ಘಟನಾ ಸ್ಥಳದಲ್ಲಿ ಜಮಾಯಿಸಿದ್ದು ಕೂಡಲೇ ಅಧಿಕಾರಿಗಳಿಗೆ ವಿಷಯ ತಿಳಿಸಿದರು. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಲೈನ್ ತೆರವುಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News