ಸಿದ್ದರಾಮಯ್ಯರ ಮೈಸೂರಿನ ನಿವಾಸ ಸೀಲ್ ಡೌನ್

Update: 2020-08-04 07:22 GMT

ಮೈಸೂರು,ಆ.4: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲಯಲ್ಲಿ ಮಂಗಳವಾರ ಮೈಸೂರಿನ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ.

ಅವರ ಹಿರಿಯ ಮಗ ರಾಕೇಶ್ ಸಿದ್ದರಾಮಯ್ಯರ ಪುಣ್ಯಸ್ಮರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜು.29 ರಿಂದ ಜ.31ರವರೆಗೆ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯ ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

ಹಾಗಾಗಿ ಟಿ.ಕೆ.ಲೇಔಟ್‌ನಲ್ಲಿರುವ ಅವರ ನಿವಾಸವನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಸೀಲ್ ಡೌನ್ ಮಾಡಿ ಮನೆಯ ಸುತ್ತಲೂ ಔಷಧಿ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಅವರ ಮನೆಯ ನೂರು ಮೀಟರ್ ವರೆಗೆ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಟಿ.ಕಾಟೂರಿನಲ್ಲಿರುವ ತೋಟಕ್ಕೂ ಸಿದ್ದರಾಮಯ್ಯ ಹೋಗಿದ್ದರಿಂದ ಅಲ್ಲಿಯೂ ಸ್ಯಾನಿಟೈಸ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ನಿವಾಸಕ್ಕೆ ದೌಢಾಯಿಸಿದ ಅಧಿಕಾರಿಗಳು: ಸಿದ್ದರಾಮಯ್ಯರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪಾಲಿಕೆ, ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ದೌಡಾಯಿಸಿ ಸೋಂಕು ಹರಡದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಮನೆಗೆ ತೆರಳಿ ಸಿದ್ದರಾಮಯ್ಯ ಅವರ ಹತ್ತಿರದ ಸಂಪರ್ಕದಲ್ಲಿದ್ದವರ ಆರೋಗ್ಯ ತಪಾಸಣೆ ಮಾಡಿದ್ದಾರೆ. ಜೊತೆಗೆ ಅವರಿಗೆ ಸ್ಲಾಬ್ ಟೆಸ್ಟ್‌ಗಳನ್ನು ಸಹ ಮಾಡಿಸಲಾಗುವುದು ಎಂದು ಹೇಳಿದ್ದಾರೆ. ಅವರ ಆರೋಗ್ಯದಲ್ಲಿ ಏನಾದರೂ ಏರು ಪೇರು ಕಂಡು ಬಂದರೆ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆ್ಯಂಬುಲೆನ್ಸ್‌ಗಳನ್ನು ಸಹ ಸಿದ್ದಪಡಿಸಿಕೊಂಡು ಬಂದಿದ್ದಾರೆ.

ಇನ್ನೂ ನಗರ ಪಾಲಿಕೆ ಅಧಿಕಾರಿಗಳು ಸಿದ್ದರಾಮಯ್ಯ ಅವರ ಮನೆಯ ಹತ್ತಿರ ಔಷಧಿ ಸಿಂಪಡಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳು ಸಿದ್ದರಾಮಯ್ಯ ಅವರ ಟ್ರಾವೆಲ್ ಹಿಸ್ಟರಿ ಕಲೆ ಹಾಕುತ್ತಿದ್ದಾರೆ. ಯಾರ್ಯಾರು ಸಿದ್ದರಾಮಯ್ಯ ಅವರ ಸಂಪರ್ಕದಲ್ಲಿ ಇದ್ದರು ಅವರೆಲ್ಲರೂ ಸೆಲ್ಫ್ ಕ್ವಾರಂಟೈನ್‌ಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News